
ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆ ಉದ್ದೇಶದಿಂದ ಬಿಜೆಪಿ ಹಮ್ಮಿಕೊಳ್ಳಲು ಮುಂದಾಗಿರುವ ‘ಕರ್ನಾಟಕ ನವನಿರ್ಮಾಣ ಪರಿವರ್ತನಾ ಯಾತ್ರೆ’ ಕರ್ನಾಟಕ ರಾಜ್ಯೋತ್ಸವ ದಿನವಾದ ನ.1ರಂದೇ ಆರಂಭವಾಗುವ ಬಗ್ಗೆ ಅನುಮಾನವಿದೆ.
ಕರ್ನಾಟಕ ರಾಜ್ಯೋತ್ಸವ ದಿನದಂದು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕನ್ನಡ ಧ್ವಜ ಹಿಡಿದುಕೊಂಡು ತಮ್ಮ ತಮ್ಮ ಪ್ರದೇಶಗಳಲ್ಲಿನ ವಿವಿಧ ಸಂಘಟನೆಗಳ ಕಾರ್ಯಕ್ರಮದಲ್ಲಿ ಭಾಗಿಯಾಗುವ ಬದಲು ಬಿಜೆಪಿ ಬಾವುಟ ಹಿಡಿದುಕೊಳ್ಳಬೇಕು ಎಂಬುದು ಅಷ್ಟು ಸೂಕ್ತವಲ್ಲ ಎಂಬ ಅಭಿಪ್ರಾಯ ಅವರ ಪಕ್ಷದ ಆಂತರಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಿಂದಿ ಹೇರುತ್ತಿದೆ ಎಂಬ ಆರೋಪ ಕೇಳಿಬರುತ್ತಿರುವ ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯೋತ್ಸವಕ್ಕಿಂತ ಪಕ್ಷದ ಕಾರ್ಯಕ್ರಮವೇ ಬಿಜೆಪಿಗರಿಗೆ ಮುಖ್ಯವಾಯಿತು ಎಂಬ ಆಪಾದನೆಯೂ ಹೊಸದಾಗಿ ಕೇಳಿಬರಬಹುದು.
ಇದನ್ನೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಮುಖಂಡರು ಟೀಕಾಸ್ತ್ರವಾಗಿ ಬಳಸಿಕೊಳ್ಳಬಹುದು. ಕನ್ನಡಪರ ಸಂಘಟನೆಗಳೂ ಟೀಕಿಸಬಹುದು. ಹೀಗಾಗಿ, ನ.1ರ ಬದಲು 2 ಅಥವಾ ಬೇರೊಂದು ದಿನಾಂಕವನ್ನು ನಿಗದಿ ಮಾಡುವುದು ಸೂಕ್ತ ಎಂಬ ಸಲಹೆಯನ್ನು ಪಕ್ಷದ ಹಲವು ಮುಖಂಡರು ರಾಜ್ಯ ನಾಯಕರಿಗೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.