ಪವರ್ ಫುಲ್ ಸಚಿವರ ಮೇಲೆ ಬಿಜೆಪಿ ಕಣ್ಣು

Published : Jul 23, 2018, 05:36 PM IST
ಪವರ್ ಫುಲ್ ಸಚಿವರ ಮೇಲೆ ಬಿಜೆಪಿ ಕಣ್ಣು

ಸಾರಾಂಶ

ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜವಾದಿ ಪಕ್ಷ ಮೈತ್ರಿ ಮಾಡಿಕೊಂಡು ಬಿಜೆಪಿಯನ್ನು ಎದುರಿಸಲು ಸಿದ್ಧತೆ ಮಾಡಿಕೊಂಡಿವೆ. ಆದರೆ ಕೇಂದ್ರದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದುಕೊಂಡಿರುವ ಬಿಜೆಪಿ ಯುಪಿಯಲ್ಲಿ ತಕ್ಕ ಉತ್ತರ ನೀಡಿ ತಿರುಮಂತ್ರ ಹಾಕಲು ಸಿದ್ಧತೆ ಮಾಡಿಕೊಂಡಿದೆ.

ಲಕ್ನೋ[ಜು.23] ಬಿಎಸ್ ಪಿ ಮತ್ತು  ಎಸ್ ಪಿ ಮೈತ್ರಿ ಮಾಡಿಕೊಂಡು ಲೋಕಸಭಾ ಚುನಾವಣೆಗೆ ಸಜ್ಜಾಗುತ್ತಿದ್ದರೆ ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. 

ಬಿಜೆಪಿಯೂ ಕೂಡ ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.  ಬಿಜೆಪಿಯ ಹಿರಿಯ ನಾಯಕರು ಯಾವ ರೀತಿಯಾಗಿ ಚುನಾವಣೆ ಎದುರಿಸಿದರೆ ಗೆಲುವು ಸಾಧ್ಯ ಎನ್ನುವುದರತ್ತ ತಮ್ಮ ಚಿತ್ರ ಹರಿಸಿದ್ದಾರೆ.  ರಾಜ್ಯದಲ್ಲಿ ಅತ್ಯಂತ ಸಮರ್ಥ ನಾಯಕರನ್ನು ಕಣಕ್ಕಿಳಿಸಿದಲ್ಲಿ ಎನ್ ಡಿಎ ಅಧಿಕಾರಕ್ಕೆ ಬರುವುದು ಸಮಸ್ಯೆಯಾಗದು ಎನ್ನುವ ನಿರ್ಧಾರಕ್ಕೆ ಬಂದಿದ್ದು ಯಾವ ಕ್ಷೇತ್ರದ ಹೊಣೆಗಾರಿಕೆ ಯಾರಿಗೆ ನೀಡಬೇಕು ಎಂಬುದನ್ನು ಬಿಜೆಪಿ ಹಿರಿಯ ನಾಯಕರು ಚಿಂತನೆ ನಡೆಸಿದ್ದಾರೆ.

ರಾಜ್ಯದಲ್ಲಿ ಅಧಿಕಾರದಲ್ಲಿರು ಬಿಜೆಪಿ ಸರಕಾರದ ಪ್ರಮುಖ ಮಂತ್ರಿಗಳಿಗೆ ಜವಾಬ್ದಾರಿ ವಹಿಸಲಾಗುತ್ತಿದೆ. ಸತೀಶ್ ಮಹನ್ನಾ, ಎಸ್.ಪಿ.ಸಾಹಿ, ದಾರಾ ಸಿಂಗ್ ಚೌಹಾಣ್ ಅಂಥವರಿಗೆ ನಿರ್ದಿಷ್ಟ ಕ್ಷೇತ್ರದ ಜವಾಬ್ದಾರಿ ವಹಿಸಿಕೊಡಲಾಗುತ್ತದೆ ಎಂದು ಬಿಜೆಪಿ ನಾಯಕರೊಬ್ಬರು ಮಾಹಿತಿ ನೀಡಿದ್ದಾರೆ. ಅತಿ ಹೆಚ್ಚಿನ ಲೋಕಸಭಾ ಕ್ಷೇತ್ರ ಹೊಂದಿರುವ ಉತ್ತರ ಪ್ರದೇಶ ಕೇಂದ್ರದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯುವ ಪ್ರತಿಯೊಂದು ಪಕ್ಷಕ್ಕೂ ಪ್ರಮುಖವಾಗುತ್ತದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ ಸಿದ್ದರಾಮಯ್ಯರಿಂದ ರಾಜ್ಯದ ದಲಿತರ ಸರ್ವನಾಶ: ಮಾಜಿ ಸಂಸದ ಪ್ರತಾಪ್ ಸಿಂಹ
Karnataka News Live:4 ವರ್ಷಗಳ ಬಳಿಕ ಕೊನೆಗೂ ಜಿಪಂ, ತಾಪಂಗಳಿಗೆ ಏಪ್ರಿಲಲ್ಲಿ ಎಲೆಕ್ಷನ್