BJP ಪ್ರಣಾಳಿಕೆ, ಪ್ರಚಾರ ಸಮಿತಿ ರಚನೆ: ರಾಜೀವ್ ಚಂದ್ರಶೇಖರ್ ಸೇರಿ ಹಲವರಿಗೆ ಸ್ಥಾನ

Published : Jan 06, 2019, 09:42 PM ISTUpdated : Jan 06, 2019, 09:51 PM IST
BJP ಪ್ರಣಾಳಿಕೆ, ಪ್ರಚಾರ ಸಮಿತಿ ರಚನೆ: ರಾಜೀವ್ ಚಂದ್ರಶೇಖರ್ ಸೇರಿ ಹಲವರಿಗೆ ಸ್ಥಾನ

ಸಾರಾಂಶ

ಮುಂಬರುವ ಲೋಕಸಭಾ ಚುನಾವಣೆಯ ಸಿದ್ಧತೆಗಾಗಿ ಬಿಜೆಪಿ ಪ್ರಣಾಳಿಕೆ ಸಮಿತಿ ಹಾಗೂ ಎಲೆಕ್ಷನ್ ಪ್ರಚಾರ ಸಮಿತಿಗಳನ್ನು ಮಾಡಿ  ಅಮಿತ್ ಶಾ ಆದೇಶ ಹೊರಡಿಸಿದ್ದಾರೆ. ಹಾಗಾದ್ರೆ ಸಮಿತಿಯಲ್ಲಿ ಯಾರೆಲ್ಲ ಇದ್ದಾರೆ? 

ಬೆಂಗಳೂರು, [ಜ.06]: 2019ರ ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಬಿಜೆಪಿ ಚುನಾವಣಾ ಪ್ರಣಾಳಿಕೆ ಸಮಿತಿ ರಚನೆ ಮಾಡಿದ್ದು, ಕೇಂದ್ರ ಸಚಿವ  ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ಪ್ರಣಾಳಿಕೆ ಸಮಿತಿ ರಚನೆ ಮಾಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪ್ರಣಾಳಿಕೆ ಸಮಿತಿ ಹಾಗೂ 2019 ಲೋಕಸಭಾ ಚುನಾವಣೆ ಪ್ರಚಾರ ಸಮಿತಿಗೆ ಒಟ್ಟ 41 ಜನರ ಪಟ್ಟಿ ಮಾಡಿ ಆದೇಶ ಹೊರಡಿಸಿದ್ದಾರೆ.

ಪ್ರಣಾಳಿಕೆ ಸಮಿತಿಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸಮಿತಿ ಅಧ್ಯಕ್ಷರಾಗಿದ್ದು, ಲೋಕಸಭಾ ಚುನಾವಣೆಯ ಪ್ರಚಾರ ಸಮಿತಿಗೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ನೇಮಿಸಿ ಅಮಿತ್ ಶಾ ಆದೇಶ ಹೊರಡಿಸಿದ್ದಾರೆ.

ಈ ಚುನಾವಣೆಯ ಪ್ರಚಾರ ಸಮಿತಿಗೆ ಕರ್ನಾಟಕದಿಂದ ಆಯ್ಕೆಯಾಗಿರುವ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರನ್ನು ನೇಮಕ ಮಾಡಲಾಗಿದೆ. ಇನ್ನು ಸಾಮಾಜಿಕ ಸಂಘಟನೆಗಳ ಜೊತೆಗಿನ ಸಂಪರ್ಕ್ ಸಮಿತಿಯಲ್ಲಿ ಸದಾನಂದ ಗೌಡರಿಗೆ ಸ್ಥಾನ ನೀಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪೌರತ್ವಕ್ಕೂ ಮುನ್ನ ಮತಪಟ್ಟೀಲಿ ಹೆಸರು : ಸೋನಿಯಾಗೆ ನೋಟಿಸ್‌
ಲೋಕಸಭೆಯಲ್ಲಿ ಮತಚೋರಿ ಕದನ : ಕೈ ಮತಗಳವಿಂದ ಅಂಬೇಡ್ಕರ್‌ಗೆ ಸೋಲು-ಬಿಜೆಪಿ