ಮಂಗಳೂರಿಗೆ ಅಮಿತ್ ಶಾ: ಭೇಟಿಯ ಹಿಂದಿನ ಮಾಸ್ಟರ್ ಪ್ಲ್ಯಾನ್ ಏನು?

By Web DeskFirst Published Nov 14, 2018, 4:00 PM IST
Highlights

ಪ್ರಮುಖ  ಮೂರು ವಿಚಾರಗಳ ಬಗ್ಗೆ ಚರ್ಚೆ ನಡೆಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು [ಬುಧವಾರ] ಮಂಗಳೂರಿಗೆ ಆಗಮಿಸಲಿದ್ದಾರೆ.

ಮಂಗಳೂರು, [ನ.14]: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು [ಬುಧವಾರ] ಮಂಗಳೂರಿಗೆ ಆಗಮಿಸಲಿದ್ದು, ಆರ್‌ಎಸ್‌ಎಸ್ ನಾಯಕರ ಸಭೆಯಲ್ಲಿ ಭಾಗಿಯಾಗಲಿದ್ದಾರೆ. 

ಸಭೆಯಲ್ಲಿ ಮೂರು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. 2019ರ ಲೋಕಸಭಾ ಕ್ಷೇತ್ರದ ಚುನಾವಣೆ, ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಮತ್ತೆ ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶ ವಿಚಾರಗಳಲ್ಲಿ ಜನರ ಅಭಿಪ್ರಾಯ ಸೇರಿದಂತೆ ಮೂರು ಪ್ರಮುಖ ವಿಚಾರಗಳ ಬಗ್ಗೆ ಚರ್ಚಿಸಲಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ರಾಜ್ಯದಲ್ಲಿರುವ 28 ಲೋಕಸಭಾ ಕ್ಷೇತ್ರದಲ್ಲಿ ಕನಿಷ್ಠ 22 ರಿಂದ 23 ಕ್ಷೇತ್ರಗಳನ್ನು ಗೆಲ್ಲಲೇಬೇಕೆಂದು ಪಣತೊಟ್ಟಿರುವ ಬಿಜೆಪಿ, ಗೆಲುವಿಗಾಗಿ ತಂತ್ರ ಪ್ರತಿತಂತ್ರಗಳನ್ನು ಹೆಣೆಯಲು ಪ್ಲಾನ್ ಮಾಡ್ತಿದೆ. 

ಇದಕ್ಕೆ ಸಂಘ ಪರಿವಾರದ ನಾಯಕರ ಸಲಹೆ ಸೂಚನೆಗಳು ಕೂಡಾ ಮುಖ್ಯವಾಗಿದೆ. ಅಲ್ಲದೇ ತಕ್ಷಣದಿಂದಲೇ ಜಾರಿಗೆ ಬರುವಂತೆ ಮಾಡಬೇಕಾದ ಬದಲಾವಣೆಗಳ ಬಗ್ಗೆಯೂ ಶಾ, ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.

2019ರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕರ್ನಾಟಕದಿಂದ ಹೆಚ್ಚಿನ ಕ್ಷೇತ್ರಗಳನ್ನು ಗೆಲ್ಲುವ ಲೆಕ್ಕಾಚಾರ ಅಮಿತ್​ ಶಾ ಅವರದ್ದಾಗಿದೆ.

click me!