ಕಾಂಗ್ರೆಸ್ ವಿರುದ್ಧ ತೊಡೆ ತಟ್ಟಿದ ಬಿಜೆಪಿ

Published : Aug 18, 2017, 01:01 PM ISTUpdated : Apr 11, 2018, 12:55 PM IST
ಕಾಂಗ್ರೆಸ್ ವಿರುದ್ಧ ತೊಡೆ ತಟ್ಟಿದ ಬಿಜೆಪಿ

ಸಾರಾಂಶ

ಭ್ರಷ್ಟಾಚಾರವನ್ನೇ ಪ್ರಮುಖ ಅಸ್ತ್ರವನ್ನಾಗಿ ಬಳಸಿಕೊಂಡು ಹೋರಾಟಕ್ಕೆ ಸಿದ್ದವಾಗಿರುವ ಬಿಜೆಪಿ ರಾಜ್ಯ ಘಟಕ ಇಂದು ವಿಧಾನ ಸಭಾ ಚಲೋ ಪ್ರತಿಭಟನೆ ನಡೆಸುತ್ತಿದೆ.

ಬೆಂಗಳೂರು(ಆ.18): ಬಿಜೆಪಿ ರಾಷ್ಟ್ರಿಯ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಭೇಟಿ ಕೊಟ್ಟ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಬಿಜೆಪಿ ಘಟಕ ಒಂದು ವಾರಗಳ ಕಾಲ ಪ್ರತಿಭಟನೆ ನಡೆಸಲು ಮುಂದಾಗಿದೆ.  

ಭ್ರಷ್ಟಾಚಾರವನ್ನೇ ಪ್ರಮುಖ ಅಸ್ತ್ರವನ್ನಾಗಿ ಬಳಸಿಕೊಂಡು ಹೋರಾಟಕ್ಕೆ ಸಿದ್ದವಾಗಿರುವ ಬಿಜೆಪಿ ರಾಜ್ಯ ಘಟಕ ಇಂದು ವಿಧಾನ ಸಭಾ ಚಲೋ ಪ್ರತಿಭಟನೆ ನಡೆಸುತ್ತಿದೆ. ಐಟಿ ದಾಳಿಗೆ ಒಳಗಾಗಿರುವ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಹಾಗೂ ಸಣ್ಣ ಕೈಗಾರಿಕೆ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಫ್ರೀಡಂ ಪಾರ್ಕ್'ನಲ್ಲಿ ಪ್ರತಿಭಟನೆ ಆರಂಭಿಸಿದೆ.

ನಾಳೆಯಿಂದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲೂ ಪಂಜಿನ ಮೆರವಣಿಗೆಗಳ ಮೂಲಕ ಪ್ರತಿಭಟನೆ ನಡೆಸಲು ಬಿಜೆಪಿ ತೀರ್ಮಾನಿಸಿದೆ.

ಇದೇ ವೇಳೆ ಮಾತನಾಡಿದ ಬಿಜೆಪಿ ಮುಖಂಡ ಆರ್. ಅಶೋಕ್, ಕಾಂಗ್ರೆಸ್'ನ ಡಿಕೆ ಶಿವಕುಮಾರ್, ರಮೇಶ್ ಜಾರಕಿಹೊಳಿ ಸೇರಿದಂತೆ ರಾಜ್ಯದ ಹತ್ತಕ್ಕೂ ಹೆಚ್ಚು ಸಚಿವರು ಭ್ರಷ್ಟಾಚಾರ ಕೂಪದಲ್ಲಿ ಮುಳುಗಿದ್ದಾರೆ. ರಾಜ್ಯವನ್ನು ಲೂಟಿ ಹೊಡೆಯುತ್ತಿರುವ ಸರ್ಕಾರದ ವಿರುದ್ದ ಯುಡಿಯೂರೊಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

ಬಹಿರಂಗ ಪ್ರತಿಭಟನೆಯ ವೇಳೆ ಸಿ.ಟಿ. ರವಿ, ಶೋಭ ಕರಂದ್ಲಾಜೆ, ಈಶ್ವರಪ್ಪ ಮುಂತಾದ ಹಿರಿಯ ನಾಯಕರು ಹಾಜರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೈಋತ್ಯ ರೈಲ್ವೆಯಲ್ಲಿ ವಂದೇ ಭಾರತ್ ಹವಾ, ಪ್ರಯಾಣಿಕರ ಸಂಖ್ಯೆ ಗಣನೀಯ ಏರಿಕೆ, ಆದಾಯದಲ್ಲೂ ಚಾಕ್‌ಪಾಟ್‌!
ಮಾನವೀಯ ಸೇವೆಯ ಹೊಸ ಹೆಜ್ಜೆ.. ನೆಲಮಂಗಲದಲ್ಲಿ 'ನೆಮ್ಮದಿ' ಪ್ಯಾಲಿಯೇಟಿವ್ ಸೆಂಟರ್ ಶುಭಾರಂಭ