
ಚಾಮರಾಜನಗರ(ಫೆ.06): ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಮಾಜಿ ಸಂಸದೆ ರಮ್ಯಾ ಹಾಗೂ ಬೆಂಗಳೂರಿನ ಬಿಜೆಪಿ ಕಾರ್ಯಕರ್ತ ಸಂತೋಷ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಜವಾಬ್ದಾರಿ ಹೇಳಿಕೆ ನೀಡಿರುವ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಹಾರ್ಲಿಕ್ಸ್, ನಶೆಡಬ್ಬ, ಸ್ಕ್ರೂಡೈವರ್ ಪೋಸ್ಟ್ ಮಾಡುವ ಮೂಲಕ ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಎಚ್.ಎಂ. ಪ್ರಣಯ್ ಮಾತನಾಡಿ, ರಮ್ಯಾ ಹೆಸರಿನಲ್ಲಿ ‘ರಂ’ ಇದ್ದು ವಿದೇಶಗಳಿಗೆ ಹೋಗಿ ಮೋಜು- ಮಸ್ತಿ ಮಾಡುವ ಅವರಿಗೆ ಪ್ರಧಾನಿಗಳ ವಿರುದ್ಧ ಮಾತನಾಡುವ ನೈತಿಕತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಕಾರ್ಯಕರ್ತ ಸಂತೋಷ್ ಅವರ ಕೊಲೆಗೆ ಸಂಬಂಧಿಸಿದಂತೆ ಹಂತಕರು ಸ್ಕ್ರೂ ಡೈವರ್‌ನಲ್ಲಿ ಚುಚ್ಚಿದ್ದಾರೆ, ಕೊಲೆ ಮಾಡಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ನೋಡಿದರೆ ಅವರ ದೇಹದಲ್ಲಿನ ಸ್ಕ್ರೂಗಳೇ ಸಡಿಲಗೊಂಡಿವೆ. ಬಿಜೆಪಿ ಯುವ ಮೋರ್ಚಾದಿಂದ ಸ್ಕ್ರೂಡ್ರೈವರ್ ಕಳುಹಿಸಿದ್ದೇವೆ. ದೇಹದಲ್ಲಿನ ಸ್ಕ್ರೂಗಳನ್ನು ಟೈಟ್ ಮಾಡಿಕೊಳ್ಳಿ ಎಂದು ವ್ಯಂಗ್ಯವಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.