
ಬೆಂಗಳೂರು(ಆ.21): ಚುನಾವಣಾ ಹೊಸ್ತಿಲಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಜಿದ್ದಿಗೆ ಬಿದ್ದಂತೆ ಆರೋಪ - ಪ್ರತ್ಯಾರೋಪದಲ್ಲಿ ತೊಡಗಿವೆ. ಬಿಎಸ್ ವೈ ವಿರುದ್ಧದ ಅಕ್ರಮ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಕೆಎಎಸ್ ಅಧಿಕಾರಿ ಬಸವರಾಜೇಂದ್ರ ನೀಡಿರುವ ದೂರು ಆಧರಿಸಿ ಸರ್ಕಾರದ ವಿರುದ್ಧ ಬಿಜೆಪಿ ಮುಗಿಬಿದ್ದಿದೆ. ಸಿದ್ದರಾಮಯ್ಯ ಸರ್ಕಾರದ ಜೊತೆ ನೇರ ಕುಸ್ತಿಗೆ ಇಳಿದಿದೆ. ನಿನ್ನೆ ಕೂಡ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದು ಇಂದೂ ಕೂಡ ಪ್ರತಿಭಟನೆ ಮುಂದುವರೆಯಲಿದೆ.
ಬಿಜೆಪಿ ರಾಜಭವನ್ ಚಲೋ
ಯಡಿಯೂರಪ್ಪ ಬೆನ್ನಿಗೆ ನಿಂತಿರುವ ಬಿಜೆಪಿ, ಗಣಿ ಇಲಾಖೆ ಉಪ ಕಾರ್ಯದರ್ಶಿ ಬಸವರಾಜೇಂದ್ರ ನೀಡಿರುವ ದೂರನ್ನೇ ಆಧರಿಸಿ ರಾಜ್ಯಪಾಲರ ಬಳಿ ಹೊರಡಲು ನಿರ್ಧರಿಸಿದೆ. ಇಂದು ಬೆಳಗ್ಗೆ ವಿಧಾನಸಭೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ನೇತೃತ್ವದ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಲಿದ್ದು, ರಾಜ್ಯ ಸರ್ಕಾರವನ್ನು ವಜಾ ಮಾಡುವಂತೆ ಆಗ್ರಹಿಸಲಿದೆ.
ಈ ಮಧ್ಯೆ ಪ್ರಕರಣ ಸಂಬಂಧ ಎರಡು ದಿನಗಳಿಂದ ಯಡಿಯೂರಪ್ಪ ಮೌನ ಕಾಯ್ದುಕೊಂಡಿದ್ದಾರೆ. ಆದ್ರೆ ಅವರ ಬೆಂಬಲಿಗರಿಂದ ಮಾತ್ರ ಸರ್ಕಾರದ ವಿರುದ್ಧ ಪ್ರತಿಭಟನೆಗಳು, ಟೀಕೆಗಳು ಮುಂದುವರಿಯುತ್ತಿವೆ. ಬಸವರಾಜೇಂದ್ರ ನೀಡಿರುವ ದೂರು ರಾಜ್ಯ ಸರ್ಕಾರದ ವಿರುದ್ಧದ ಹೋರಾಟಕ್ಕೆ ಬಿಜೆಪಿಗೆ ಬಲ ತುಂಬಿದ್ದು, ಸಾಧ್ಯವಾದಷ್ಟೂ ಲಾಭ ಪಡೆಯುವ ಉಮೇದಿನಲ್ಲಿ ಕಮಲ ಪಕ್ಷ ಇದೆ.
ವರದಿ: ಕಿರಣ್ ಹನಿಯಡ್ಕ, ಸುವರ್ಣ ನ್ಯೂಸ್.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.