
ಬೆಂಗಳೂರು (ಫೆ.02): ಬಿಜೆಪಿ ಕಾರ್ಯಕರ್ತರ ಹತ್ಯೆಗಳು ರಾಜ್ಯದಲ್ಲಿ ಮೇಲಿಂದ ಮೇಲೆ ಆಗುತ್ತಿದೆ. ಆದರೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಬಿಜೆಪಿ ಇವತ್ತು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ.
ರಾಜ್ಯದಲ್ಲಿ ಹೆಚ್ಚುತ್ತಿರುವ ಹಿಂದೂಪರ ಕಾರ್ಯಕರ್ತರ ಹತ್ಯೆಗಳನ್ನು ಖಂಡಿಸಿ ಇಂದು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಬಿಜೆಪಿ ಕಾರ್ಯಕರ್ತರಾಗಿದ್ದ ರುದ್ರೇಶ್, ದೀಪಕ್ ರಾವ್ , ಸಂತೋಷ್ ಹತ್ಯೆಗಳಿಂದ ಆಕ್ರೋಶಗೊಂಡಿರುವ ಬಿಜೆಪಿ, ಬೆಳಗ್ಗೆ ಶಿವಾಜಿ ನಗರದ ದಂಡು ಮಾರಿಯಮ್ಮ ದೇವಸ್ಥಾನದ ಬಳಿ ಬೃಹತ್ ಪ್ರತಿಭಟನೆ ನಡೆಸಲಿದೆ. ಮಾಜಿ ಡಿಸಿಎಂ ಆರ್ . ಅಶೋಕ್ , ಮಾಜಿ ಸಚಿವ ಅರವಿಂದ ಲಿಂಬಾವಳಿ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.
ಇತ್ತೀಚಿಗೆ ರಾಜಕೀಯ ಪ್ರೇರಿತ ಹತ್ಯೆಗಳು ಹೆಚ್ಚಾಗಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಪೋಲೀಸರ ಮನೆಗಳಿಗೇ ನುಗ್ಗಿ ದರೋಡೆ ಮಾಡಲಾಗ್ತಿದೆ ಆದರೂ ಕೂಡಾ ಸರ್ಕಾರ ನಿದ್ರಾವಸ್ಥೆಯಲ್ಲಿದೆ. ರಾಜ್ಯದ ಕಾನೂನು ಸುವ್ಯವಸ್ಥೆ ಹಾಳಾಗಲು ಕಾಂಗ್ರೆಸ್ ಸರಕಾರವೇ ನೇರ ಕಾರಣ . ಹಾಗಾಗಿ ಸಿದ್ದರಾಮಯ್ಯನವರೇ ಇನ್ನೆಷ್ಟು ಕೊಲೆಗಳು ಬೇಕು ಅನ್ನೊ ಘೋಷವಾಕ್ಯದಡಿ ಇಂದು ಬಿಜೆಪಿ ಪ್ರತಿಭಟನೆ ನಡೆಸಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.