
ಮೈಸೂರು/ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುತ್ತಿರುವ ನವ ಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆ ಗುರುವಾರ ಮೈಸೂರಿನಲ್ಲಿ ಮುಕ್ತಾಯ ಕಾಣಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ನೆಲದಲ್ಲಿ ನಡೆಯುತ್ತಿರುವ ಯಾತ್ರೆಯ ಕೊನೆಯ ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪಾಲ್ಗೊಳ್ಳುತ್ತಿದ್ದಾರೆ.
ಮಹದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಪರ ಸಂಘಟನೆಗಳು ಹಮ್ಮಿಕೊಂಡಿರುವ ರಾಜ್ಯ ಬಂದ್ ನಡುವೆಯೇ ಮೈಸೂರಿನಲ್ಲಿ ಸಮಾವೇಶ ನಡೆಸಲು ಭರದ ಸಿದ್ಧತೆ ನಡೆಸಿರುವ ರಾಜ್ಯ ಬಿಜೆಪಿ ನಾಯಕರು ಶತಾಯಗತಾಯ ಈ ಸಮಾವೇಶದ ಮೂಲಕ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಲು ಸಜ್ಜಾಗಿದ್ದಾರೆ.
ಕಳೆದ ವರ್ಷದ ನವೆಂಬರ್ 2ರಂದು ಬೆಂಗಳೂರಿನಲ್ಲಿ ಆರಂಭಗೊಂಡ ಬಿಜೆಪಿಯ ಪರಿವರ್ತನಾ ಯಾತ್ರೆಗೆ ಪಕ್ಷದ ಅಧ್ಯಕ್ಷ ಅಮಿತ್ ಶಾ ಅವರೇ ಚಾಲನೆ ನೀಡಿದ್ದರು. ಆದರೆ, ಆ ಸಮಾವೇಶದಲ್ಲಿ ನಿರೀಕ್ಷಿತ ಪ್ರಮಾಣದಷ್ಟು ಕಾರ್ಯಕರ್ತರು ಭಾಗವಹಿಸದೇ ಇದ್ದುದರಿಂದ ಶಾ ಅವರು ಅಸಮಾಧಾನಗೊಂಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.