
ಹಾಸ, [ಸೆ.05]: ಆಪರೇಷನ್ ಕಮಲದಿಂದ ನನಗೂ ಆಫರ್ ಬಂದಿದ್ದು ನಿಜ. 5 ಕೋಟಿ ಅಲ್ಲ 50 ಕೋಟಿಗೆ ಕರೆದರು ಎಂದು ಬೇಲೂರು ಕ್ಷೇತ್ರ ಜೆಡಿಎಸ್ ಶಾಸಕ ಕೆ.ಎಸ್ ಲಿಂಗೇಶ್ ಹೊಸ ಬಾಂಬ್ ಸಿಡಿಸಿದ್ದಾರೆ.
ಹಾಸನ ಬೇಲೂರು ಜೆಡಿಎಸ್ ಕಾರ್ಯಕರ್ತರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ಜತೆಯಲ್ಲೇ ಎಚ್.ಡಿ. ರೇವಣ್ಣ ಅವರಿಗೆ ಬಿಜೆಪಿಯವರು ಉಪಮುಖ್ಯಮಂತ್ರಿ ಹುದ್ದೆ ಆಫರ್ ನೀಡಿದ್ದರು ಎಂದು ಗಂಭೀರ ಆರೋಪ ಮಾಡಿದರು.
ಅಷ್ಟ ಅಲ್ಲದೇ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ಅವರಿಗೆ ಪತ್ನಿ ಚಂಚಲ ಕುಮಾರಸ್ವಾಮಿ ಕಡೆಯಿಂದ ಆಫರ್ ನೀಡಿದ್ದರು. ಆದರೆ, ನಾವು ಯಾರೂ ಬಿಜೆಪಿ ಆಮಿಷಕ್ಕೆ ಬಲಿಯಾಗಲಿಲ್ಲ ಎಂದು ಸ್ಪಷ್ಟಪಡಿಸಿದರು.
ಇಷ್ಟೆಲ್ಲಾ ಹಣ ನೀಡುವುದಾಗಿ ನಮಗೆ ಆಫರ್ ನೀಡಿದ ಬಿಜೆಪಿಯಿವರನ್ನು ಯಾರೂ ಬಂಧಿಸುತ್ತಿಲ್ಲ. ಆದರೆ, ಕೇವಲ 8 ಕೋಟಿ ರು. ಗಾಗಿ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಬಂಧಿಸಿದ್ದಾರೆ ಇಡಿ ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.
ನಾನು ಬಿಜೆಪಿಗೆ ಹೋಗುತ್ತೇನೆ ಎಂದು ನನ್ನ ಹೆಸರು ಕೆಡಿಸುವ ಪ್ರಯತ್ನ ಮಾಡಿದ್ದರು. ಆದರೆ ನಾನು ಯಾವುದೇ ಕಾರಣಕ್ಕೂ ದೇವೇಗೌಡರನ್ನು ಬಿಟ್ಟು ಹೋಗುವುದಿಲ್ಲ. ನಾವು ಉತ್ತರ ಭಾರತದ ದಬ್ಬಾಳಿಕೆಯಿಂದ ಹೊರಬರಬೇಕಿದೆ. 25 ಸಂಸದರನ್ನು ಗೆಲ್ಲಿಸಿದರೂ ಕೇಂದ್ರದಿಂದ ಬಿಡಿಗಾಸು ನೆರೆ ಪರಿಹಾರ ಪಡೆಯಲು ಸಾಧ್ಯವಾಗಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.