
ನವದೆಹಲಿ : ತೀವ್ರ ಕುತೂಹಲ ಮೂಡಿಸಿರುವ 2002ರ ನರೋಡಾ ಗಾಮ್ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವೆ ಮಾಯಾ ಕೊಡ್ನಾನಿ ನಿರ್ದೋಷಿಯಾಗಿದ್ದಾರೆ . ನರೋಡಾ ಗಾಮ್ ಹತ್ಯಾಕಾಂಡದಲ್ಲಿ 97ಕ್ಕೂ ಹೆಚ್ಚು ಮುಸ್ಲಿಮರ ಹತ್ಯೆಯಾಗಿದ್ದು, ಹತ್ಯಾಕಾಂಡಕ್ಕೆ ಅಂದಿನ ಗುಜರಾತ್ ರಾಜ್ಯ ಮುಖ್ಯಮಂತ್ರಿ ನರೇಂದ್ರ ಮೋದಿ ಹಾಗೂ ಇತರರ ಗುಂಪುಗಳೇ ಹೊಣೆಯೆಂದು ಆರೋಪಿಸಲಾಗಿತ್ತು.
ಹಿಂಸಾಚಾರ ಪ್ರಕರಣದಲ್ಲಿ ಮಾಜಿ ಬಿಜೆಪಿ ಸಚಿವೆ ಮಾಯಾ ಕೊಡ್ನಾನಿಯವರಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಇತರೆ 13 ಮಂದಿಗೆ ಸಮನ್ಸ್ ಜಾರಿ ಮಾಡುವಂತೆ ಮಾಯಾ ಅವರು ನ್ಯಾಯಾಲಯದ ಮುಂದೆ ಮನವಿ ಮಾಡಿಕೊಂಡಿದ್ದರು.. ಭಜರಂಗ ದಳದ ಮುಖಂಡ ಬಾಬು ಬಜರಂಗಿ, ಸ್ಥಳೀಯ ಬಿಜೆಪಿ ನಾಯಕರಾದ ಬಿಪಿನ್ ಪಂಚಾಲ್, ಕಿಶನ್ ಕೊರಾನಿ, ಅಶೋಕ್ ಸಿಂಧಿ ಮತ್ತು ರಾಜು ಕುಮಾರ್ ಸೇರಿದಂತೆ ಒಟ್ಟು 82 ಮಂದಿ ವಿಚಾರಣೆ ಎದುರಿಸುತ್ತಿದ್ದಾರೆ. ಬಾಬು ಭಜರಂಗಿ ಜೀವಾವಧಿ ಶಿಕ್ಷೆಎತ್ತಿ ಹಿಡಿದ ಗುಜರಾತ್ ಕೋರ್ಟ ಇಂದು ಮಾಜಿ ಸಚಿವೆ ಮಾಯಾ ಕೊಡ್ನಾನಿ ನಿರ್ದೋಷಿ ಎಂದು ತೀರ್ಪು ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.