
ಬೆಂಗಳೂರು (ಅ.23): ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಾರ್ ಮುಂದುವರಿದಿದೆ. ಆಚರಣೆಗೆ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ ಮತ್ತು ಸಂಘ ಪರಿವಾರ ಇಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಸಮಾವೇಶ ನಡೆಸಿ ಸರ್ಕಾರದ ವಿರುದ್ಧ ಹರಿಹಾಯ್ದಿದೆ.
ಈ ಮಧ್ಯೆ ಅಕ್ಟೋಬರ್ 25ರಿಂದ ರಾಜ್ಯವ್ಯಾಪಿ ಒನಕೆ ಪ್ರತಿಭಟನೆ, ಪಂಜಿನ ಮೆರವಣಿಗೆ ನಡೆಸಲು ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ವಿರೋಧಿ ಹೋರಾಟ ಸಮಿತಿ ತೀರ್ಮಾನಿಸಿದೆ.
ರಾಜ್ಯದಲ್ಲಿ ಟಿಪ್ಪು ವಾರ್ ಜೋರಾಗಿದೆ. ಜಯಂತಿ ಆಚರಣೆಯನ್ನು ವಿರೋಧಿಸಿರುವ ಬಿಜೆಪಿ ಮತ್ತು ಸಂಘ ಪರಿವಾರ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಜಯಂತಿ ವಿರೋಧಕ್ಕೆ ಸಜ್ಜಾಗಿವೆ. ಬೆಂಗಳೂರಿನಲ್ಲಿ ಇಂದು ರಾಜ್ಯಮಟ್ಟದ ಸಮಾವೇಶ ನಡೆಸಿದ ವಿರೋಧಿ ಹೋರಾಟ ಸಮಿತಿ ಸರ್ಕಾರದ ವಿರುದ್ಧ ಹರಿಹಾಯ್ದಿದೆ. ಇನ್ನು ಸಮಾವೇಶದಲ್ಲಿ ಮಾತನಾಡಿದ ಹೋರಾಟ ಸಮಿತಿ ಸಂಚಾಲಕ ಅಡ್ಡಂಡ ಕಾರ್ಯಪ್ಪ ಕೊಡವರ ಮನೆಯ ನಾಯಿಗಳಿಗೆ ಟಿಪ್ಪು ಹೆಸರನ್ನು ಇಡಲಾಗಿದೆ ಎಂದು ಹೇಳಿದ್ದಾರೆ. ಇನ್ನು ಇದೇ ಸಮಾವೇಶದಲ್ಲಿ ಮಾತನಾಡಿದ ಮೈಸೂರು ಕೊಡಗು ಸಂಸದ ಪ್ರತಾಪ ಸಿಂಹ, ಟಿಪ್ಪು ಸಿನಿಮಾ ಮಾಡಲು ಹೋಗಿ ನಟ ಸಂಜಯ್ ಖಾನ್ ಮೈಸುಟ್ಟುಕೊಂಡ, ಖಡ್ಗ ತರಲು ಹೋಗಿ ವಿಜಯ್ ಮಲ್ಯ ದೇಶ ಬಿಟ್ಟು ಹೋದ, ಇನ್ನು ಜಯಂತಿ ಆಚರಣೆಗೆ ಹೊರಟಿರುವ ಸಿದ್ಧರಾಮಯ್ಯನವರಿಗೆ ಇರುವುದು ಆರು ತಿಂಗಳ ಆವಧಿ ಮಾತ್ರ ಎಂದು ಹೇಳಿದ್ದಾರೆ.
ಇನ್ನು ಇಂದು ಬೆಂಗಳೂರಿನಲ್ಲಿ ಸಭೆ ಸೇರಿದ್ದ ಟಿಪ್ಪು ಜಯಂತಿ ಆಚರಣೆ ವಿರೋಧಿ ಹೋರಾಟ ಸಮಿತಿ ಅಕ್ಟೋಬರ್ 25ರಂದು ರಾಜ್ಯವ್ಯಾಪಿ ಒನಕೆ ಪ್ರತಿಭಟನೆ, ಕಪ್ಪು ಪಟ್ಟಿ ಪ್ರದರ್ಶನ ಮತ್ತು ಪಂಜಿನ ಮೆರವಣಿಗೆ ನಡೆಸಲು ತೀರ್ಮಾನಿಸಿದೆ. ಅಲ್ಲದೇ ಜಯಂತಿ ಆಚರಣೆಯಲ್ಲಿ ಬಿಜೆಪಿ ಕಾರ್ಯಕರ್ತರು, ಜನಪ್ರತಿನಿಧಿಗಳು ಆಹ್ವಾನ ಪತ್ರಿಕೆಯಲ್ಲಿ ಹೆಸರು ಹಾಕಿದಲ್ಲಿ ಪಾಲ್ಗೊಂಡು ಆಚರಣೆ ಕಾರ್ಯಕ್ರಮದಲ್ಲೇ ವಿರೋಧಿಸುವ ಚಿಂತನೆ ಕೂಡಾ ನಡೆದಿದೆ. ಇದೆಲ್ಲದರ ಮಧ್ಯೆ ರಾಜ್ಯ ಸರ್ಕಾರ ಮಾತ್ರ ಟಿಪ್ಪು ಜಯಂತಿ ಆಚರಿಸಿಯೇ ಸಿದ್ಧ ಎಂದು ಹೇಳುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.