
ನವದೆಹಲಿ (ಸೆ.11): ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಆರ್’ಎಸ್’ಎಸ್ ಹಾಗೂ ಬಿಜೆಪಿಯೇ ಕಾರಣ ಎಂದು ತಳುಕು ಹಾಕಿದ ಖ್ಯಾತ ಇತಿಹಾಸಕಾರ ರಾಮಚಂದ್ರಾ ಗುಹಾರವರಿಗೆ ಬಿಜೆಪಿ ಲೀಗಲ್ ನೋಟಿಸ್ ಕಳುಹಿಸಿದೆ.
ಗೌರಿ ಲಂಕೇಶ್ ಹತ್ಯೆಯಾದಾಗ ರಾಮಚಂದ್ರ ಗುಹಾ ಹತ್ಯೆಗೆ ಸಂಘ ಪರಿವಾರದವರೇ ಕಾರಣ ಎಂದು ನೇರವಾದ ಆರೋಪ ಹೊರಿಸಿದ್ದರು. ಗೋವಿಂದ ಪನ್ಸಾರೆ, ದಾಬೋಲ್ಕರ್, ಕಲ್ಬುರ್ಗಿಯವರ ಹತ್ಯೆ ಮಾಡಿದಂತೆ ಗೌರಿ ಲಂಕೇಶ್’ರವರನ್ನು ಸಂಘ ಪರಿವಾರದವರೇ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಕೇಂದ್ರ ಸರ್ಕಾರದ ಆಡಳಿತ ಜನರಲ್ಲಿ ದ್ವೇಷ, ಅಸಹಿಷ್ಣುತೆ ಭಾವನೆಯನ್ನು ಬಿತ್ತುತ್ತಿದೆ ಎಂದಿದ್ದರು. ಗುಹಾರವರ ಹೇಳಿಕೆಯನ್ನು ಖಂಡಿಸಿ ಕರ್ನಾಟಕ ಯುವ ಮೋರ್ಚಾ ಲೀಗಲ್ ನೋಟಿಸ್ ಕಳುಹಿಸಿದೆ.
ಗುಹಾರವರು ಬಿಜೆಪಿ ಹಾಗೂ ಮೋದಿ ಸರ್ಕಾರವನ್ನು ಸದಾ ಟೀಕಿಸುತ್ತಿದ್ದರು. ಹಾಗಾಗಿ ಇವರಿಗೆ ಬೆದರಿಕಾ ಈ ಮೇಲ್’ಗಳನ್ನು ಕಳುಹಿಸಲಾಗಿತ್ತು ಎಂದು ರಾಮಚಂದ್ರ ಗುಹಾ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.