
ಬೆಂಗಳೂರು[ಮಾ.07]: ಉದ್ದ ತಿಲಕ ಇಟ್ಟವರನ್ನು ಕಂಡರೆ ತಮಗೆ ಭಯ ಎಂಬ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡುವ ಸಂಬಂಧ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ತಾವು ತಿಲಕ ಇಟ್ಟುಕೊಂಡಿರುವ ಫೋಟೋ ಟ್ವೀಟ್ ಮಾಡಿದ್ದಾರೆ.
#SelfieWithTilak ಎಂಬ ಹ್ಯಾಷ್‌ಟ್ಯಾಗ್‌ನೊಂದಿಗೆ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿರುವ ಅವರು, ಇದೊಂದು ಹತಾಶೆಯ ಹೇಳಿಕೆ. ಕಾಂಗ್ರೆಸ್ ನಾಯಕರಲ್ಲಿ ಸಭ್ಯತೆಯಾಗಲಿ ಅಥವಾ ನಾಚಿಕೆಯಾಗಲಿ ಉಳಿದಿಲ್ಲ. ತಿಲಕ ಇಟ್ಟುಕೊಳ್ಳುವುದಕ್ಕೂ ರಾಜಕಾರಣಕ್ಕೂ ಯಾವುದೇ ಸಂಬಂಧವಿಲ್ಲ. ಅದು ಭಾರತೀಯ ಸಂಸ್ಕೃತಿಯ ಭಾಗ ಅಷ್ಟೆ. ನನಗೆ ಅದರ ಬಗ್ಗೆ ಹೆಮ್ಮೆಯಿದೆ ಎಂದು ಶೋಭಾ ಹೇಳಿದ್ದಾರೆ.
ಬಿಜೆಪಿಯ ಇತರ ಹಲವು ಮುಖಂಡರೂ ಸಿದ್ದರಾಮಯ್ಯ ಅವರ ಹೇಳಿಕೆಗಳನ್ನು ಖಂಡಿಸಿದ್ದಾರೆ. ಶೋಭಾ ಟ್ವೀಟ್‌ನಿಂದಾಗಿ ಸಾಮಾಜಿಕ ಜಾಲತಾಣದಲ್ಲಿ ಸೆಲ್ಫಿ ವಿತ್ ತಿಲಕ ಅಭಿಯಾನವೇ ಆರಂಭವಾಗಿದ್ದು, ನೂರಾರು ಜನರು ತಾವು ತಿಲಕ ಇಟ್ಟುಕೊಂಡಿರುವುದರ ಸೆಲ್ಫಿ ತೆಗೆದು ಅಪ್‌ಲೋಡ್ ಮಾಡತೊಡಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.