
ಬೆಂಗಳೂರು (ಜ.02): ಬಿಜೆಪಿ ಚಾಣಕ್ಯ ಅಮಿತ್ ಶಾ ರಾಜ್ಯ ಭೇಟಿ ನಂತರ ಬಿಜೆಪಿ ನಾಯಕರು ಫುಲ್ ಚುರುಕಾಗಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಕಾರ್ಯತಂತ್ರ ಹೆಣೆಯುತ್ತಿದೆ.
ಪರಿವರ್ತನಾ ಯಾತ್ರೆ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಮತ್ತೊಂದು ರಾಜ್ಯ ಪ್ರವಾಸ ಕೈಗೊಳ್ಳಲಿದ್ದು ಆಗ ಬಸ್ ಬದಲು ಹೆಲಿಕಾಪ್ಟರ್'ನಲ್ಲಿ ರಾಜ್ಯ ಪ್ರವಾಸ ಮಾಡುವಂತೆ ಅಮಿತ್ ಶಾ ಸೂಚನೆ ನೀಡಿದ್ದಾರೆ.
ಅಮಿತ್ ಶಾ ಸೂಚನೆಯಂತೆ ರಾಜ್ಯ ಸುತ್ತಲು ಹೆಲಿಕಾಪ್ಟರ್ ಬಳಸುವಂತೆ ಬಿಎಸ್ವೈಗೆ ಮನವಿ ಮಾಡಲಾಗಿದ್ದು, ಗೆಲ್ಲಬಹುದಾದ 150 ವಿಧಾನಸಭಾ ಕ್ಷೇತ್ರಗಳಲ್ಲಿ ಮಾತ್ರ ಹೆಲಿಕಾಪ್ಟರ್'ನಲ್ಲೇ ಪ್ರಯಾಣ ಬೆಳೆಸಲಿದ್ದಾರೆ.
ಹೆಲಿಕಾಪ್ಟರ್ ಪ್ರವಾಸದ ವೇಳೆ ಬಿಎಸ್ ವೈ ಜತೆ ಸ್ಟಾರ್ ಪ್ರಚಾರಕರೂ ಸಾಥ್ ನೀಡಲಿದ್ದಾರೆ.
ಜನವರಿ ಅಂತ್ಯಕ್ಕೆ ಪರಿವರ್ತನಾ ಯಾತ್ರೆ ಮುಗಿಯಲಿದ್ದು ಬಳಿಕ ಒಂದು ವಾರ ಬಿಎಸ್ವೈ ವಿಶ್ರಾಂತಿ ತೆಗೆದುಕೊಳ್ಳಲಿದ್ದಾರೆ. ವಿಶ್ರಾಂತಿ ಬಳಿಕ ಫೆಬ್ರವರಿ 3ನೇ ವಾರದಲ್ಲಿ ಹೆಲಿಕಾಪ್ಟರ್ ಪ್ರವಾಸ ಆರಂಭಿಸುವಂತೆ ಅಮಿತ್ ಶಾ ಸೂಚಿಸಿದ್ದಾರೆ. ಚುನಾವಣಾ ಪ್ರಚಾರಕ್ಕಾಗಿ ಪಕ್ಷದ ವತಿಯಿಂದಲೇ ಬಿಎಸ್ವೈಗೆ ಹೆಲಿಕಾಪ್ಟರ್ ವ್ಯವಸ್ಥೆ ಮಾಡಲಾಗಿದೆ ಎಂದು ಸುವರ್ಣ ನ್ಯೂಸ್ಗೆ ಬಿಜೆಪಿಯ ಉನ್ನತ ಮೂಲಗಳ ಮಾಹಿತಿ ಲಭ್ಯವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.