
ಚಂಢೀಗಡ(ಡಿ.20): ಪಂಜಾಬ್'ನ ರಾಜಧಾನಿ ಚಂಢೀಗಡದ ಮುನ್ಸಿಪಲ್ ಚುನಾವಣೆಯಲ್ಲಿ ಆಡಳಿತ ಪಕ್ಷಗಳಾದ ಬಿಜೆಪಿ ಮತ್ತು ಅಕಾಲಿದಳ ಸಮ್ಮಿಶ್ರ ಕೂಟವು ಭಾರೀ ಅಂತರದಲ್ಲಿ ಜಯಗಳಿಸಿದೆ.
ಈ ಫಲಿತಾಂಶವು ಮುಂಬರಲಿರುವ ವಿಧಾನಸಭೆ ಚುನಾವಣೆ ದಿಕ್ಸೂಚಿ ಎಂದೇ ಭಾವಿಸಲಾಗುತ್ತಿದೆ. ಮುನ್ಸಿಪಲ್ ಚುನಾವಣೆಯಲ್ಲಿ ಮೈತ್ರಿ ಸರ್ಕಾರದ 26 ಸ್ಥಾನಗಳ ಪೈಕಿ 21 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್'ನ ನಾಲ್ಕು ಹಾಗೂ ಒಬ್ಬ ಸ್ವತಂತ್ರ ಅಭ್ಯರ್ಥಿ ಉಳಿದ ಸ್ಥಾನವನ್ನು ಪಡೆದಿದ್ದಾರೆ.
ಜನತೆ ನೋಟು ಅಮಾನ್ಯವನ್ನು ಒಪ್ಪಿ ಮತ ಚಲಾಯಿಸಿದ್ದಾರೆ ಎಂಬುದನ್ನು ಈ ಫಲಿತಾಂಶ ಸೂಚಿಸುತ್ತದೆ ಎಂದು ಬಿಜೆಪಿ ಮುಖ್ಯಸ್ಥ ಅಮಿತ್ ಶಾ ಬಣ್ಣಿಸಿದ್ದಾರೆ.
ಕಳೆದ ಹತ್ತು ವರ್ಷಗಳಿಂದ ಸತತವಾಗಿ ಆಡಳಿತ ನಡೆಸುತ್ತಿರುವ ಸಮ್ಮಿಶ್ರ ಸರ್ಕಾರದ ಆಡಳಿತ ವಿರೋಧಿ ಅಲೆಯ ಹೊರತಾಗಿಯೂ ಆಡಳಿತ ಪಕ್ಷಕ್ಕೆ ಈ ಗೆಲುವು ಮತ್ತಷ್ಟು ಬೆಂಬಲ ಚೇತರಿಕೆ ನೀ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.