ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆ : ಬಿಜೆಪಿಗೆ ಭರ್ಜರಿ ಬಹುಮತ

Published : Nov 29, 2016, 02:46 PM ISTUpdated : Apr 11, 2018, 12:41 PM IST
ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆ : ಬಿಜೆಪಿಗೆ ಭರ್ಜರಿ ಬಹುಮತ

ಸಾರಾಂಶ

ಒಟ್ಟು 123 ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 107 ಸ್ಥಾನಗಳಲ್ಲಿ ಜಯಗಳಿಸಿದೆ. 2 ಪುರಸಭೆ,ಒಂದು ತಾಲೂಕು ಪಂಚಾಯಿತಿ ಒಳಗೊಂಡು ಹಲವು ಸ್ಥಳೀಯ ಸಂಸ್ಥೆಗಳಿಗೆ ಭಾನುವಾರ ಚುನಾವಣೆ ನಡೆದಿತ್ತು.

ಅಹಮದಾಬಾದ್(ನ.29): ನೋಟು ರದ್ದತಿ ಯೋಜನೆ ಗುಜರಾತಿನಲ್ಲಿ ಸಕಾರಾತ್ಮಕವಾಗಿ ಪರಿಣಮಿಸಿದ್ದು, ರಾಜ್ಯದಾದ್ಯಂತ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಯು ಭರ್ಜರಿ ಜಯ ಗಳಿಸಿದೆ. ಈ ಗೆಲುವಿನಿಂದ ಮುಂದಿನ ವರ್ಷ ನಡೆಯುವ ವಿಧಾನಸಭೆ ಚುನಾವಣೆಗೆ ಗೆಲುವಿನ ಮುನ್ನುಡಿ ಬರೆದಿದೆ.

ಒಟ್ಟು 123 ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 107 ಸ್ಥಾನಗಳಲ್ಲಿ ಜಯಗಳಿಸಿದೆ. 2 ಪುರಸಭೆ,ಒಂದು ತಾಲೂಕು ಪಂಚಾಯಿತಿ ಒಳಗೊಂಡು ಹಲವು ಸ್ಥಳೀಯ ಸಂಸ್ಥೆಗಳಿಗೆ ಭಾನುವಾರ ಚುನಾವಣೆ ನಡೆದಿತ್ತು.

ವಿರೋಧ ಪಕ್ಷವಾದ ಕಾಂಗ್ರೆಸ್  ಕೇವಲ 16 ಸ್ಥಾನಗಳನ್ನು ಮಾತ್ರ ಜಯಗಳಿಸಿದೆ. ವಲ್ಸಾಡ್ ಜಿಲ್ಲೆಯ ವಾಪಿ ಪುರಸಭೆಯ ಒಟ್ಟು 44 ಸ್ಥಾನಗಳಲ್ಲಿ ಬಿಜೆಪಿ 41 ಸ್ಥಾನಗಳಲ್ಲಿ ಜಯಗಳಿಸಿದೆ. ಸೂರತ್' ಜಿಲ್ಲೆಯಲ್ಲಿ 28ಕ್ಕೆ 27 ಸ್ಥಾನಗಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯುಪಿಎಸ್‌ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
ಜಾಗತಿಕ ಶಾಂತಿ-ಸೌಹಾರ್ದತೆಗೆ ಧ್ಯಾನವೇ ಮಾರ್ಗ: ವಿಶ್ವಸಂಸ್ಥೆಯಲ್ಲಿ ರವಿಶಂಕರ್ ಗುರೂಜಿ ಸಂದೇಶ