ಎಸ್.ಎಂ ಕೃಷ್ಣ ರಾಜಕೀಯ ಅನುಭವ ಬಳಸಿಕೊಳ್ಳಲು ಮುಂದಾದ ಬಿಜೆಪಿ

By Suvarna Web DeskFirst Published Jan 8, 2018, 8:03 AM IST
Highlights

ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯ ಚುನಾವಣಾ ಉಸ್ತುವಾರಿಯೂ ಆಗಿರುವ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹಾಗೂ ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಅವರು ಭಾನುವಾರ ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದರು.

ಬೆಂಗಳೂರು(ಜ.08): ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯ ಚುನಾವಣಾ ಉಸ್ತುವಾರಿಯೂ ಆಗಿರುವ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹಾಗೂ ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಅವರು ಭಾನುವಾರ ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದರು.

ಈ ಮೂಲಕ ಕೊನೆಗೂ ಅವರ ಅನುಭವ ಬಳಸಿಕೊಳ್ಳಲು ರಾಜ್ಯ ಬಿಜೆಪಿ ಮುಂದಾಗಿದೆ. ಸುಮಾರು ಅರ್ಧ ಗಂಟೆಗೂ ಹೆಚ್ಚಿನ ಸಮಯ ನಡೆದ ಚರ್ಚೆಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಯಾವ ರೀತಿಯ ಸಿದ್ಧತೆ ನಡೆಸಬೇಕು? ಯಾವ ಕ್ಷೇತ್ರದಲ್ಲಿ ಯಾವ ರೀತಿಯಲ್ಲಿ ಪ್ರಚಾರ ನಡೆಸಬಹುದು? ಹೇಗೆಲ್ಲಾ ಯೋಜನೆಗಳನ್ನು ಸಿದ್ಧಪಡಿಸಿದರೆ ಅನುಕೂಲವಾಗಬಹುದು ಎಂಬುದರ ಕುರಿತು ಅಭಿಪ್ರಾಯ ಸಂಗ್ರಹಿಸಿದರು ಎನ್ನಲಾಗಿದೆ.

ಕೃಷ್ಣ ಅವರಿಗೆ ವಯಸ್ಸಿನ ಕಾರಣದಿಂದ ಸಭೆ, ಸಮಾರಂಭಗಳಲ್ಲಿ ಹೆಚ್ಚು ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಚುನಾವಣೆ ಹಿನ್ನೆಲೆಯಲ್ಲಿ ಅವರ ಅನುಭವವನ್ನು ಪಕ್ಷದ ಕಾರ್ಯಕ್ರಮಗಳಿಗೆ, ಮುಂಬರುವ ಚುನಾವಣೆ ತಂತ್ರಗಳಿಗೆ ಬಳಸಿಕೊಳ್ಳಲು ಉದ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಾವಡೇಕರ್ ಅವರು ಭೇಟಿ ಮಾಡಿದ್ದರು ಎಂದು ಮೂಲಗಳು ತಿಳಿಸಿವೆ.

click me!