ಕೈ ಬಿಡದ ಶ್ರೀರಾಮ: ಬಂಗಾಳ ಲೋಕಲ್ ಫೈಟ್‌ನಲ್ಲಿ ಬಿಜೆಪಿ ಪಾರಮ್ಯ!

Published : Jun 05, 2019, 01:05 PM IST
ಕೈ ಬಿಡದ ಶ್ರೀರಾಮ: ಬಂಗಾಳ ಲೋಕಲ್ ಫೈಟ್‌ನಲ್ಲಿ ಬಿಜೆಪಿ ಪಾರಮ್ಯ!

ಸಾರಾಂಶ

ಬಂಗಾಳದಲ್ಲಿ ಬಿಜೆಪಿಗೆ ಮಹಾ ಕಾಳಿ, ಶ್ರೀರಾಮನ ಆಶೀರ್ವಾದ| ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪಾರಮ್ಯ ಮೆರೆದ ಬಿಜೆಪಿ| ಲೋಕ ಸಮರದ ಬಳಿಕ ಸ್ಥಳೀಯ ಚುನಾವಣೆಯಲ್ಲೂ ಸಾಮರ್ಥ್ಯ ಹೆಚ್ಚಿಸಿಕೊಂಡ ಬಿಜೆಪಿ| 34 ವಾರ್ಡ್‌ಗಳ ಪೈಕಿ 26 ಕೌನ್ಸಿಲರ್‌ಗಳು ಬಿಜೆಪಿ ಪರ ಮತ| ಭಾತ್‌ಪಾರಾ ನಗರಸಭೆಯಲ್ಲಿ ಬಿಜೆಪಿ ಜಯಭೇರಿ| ಸಂಸದ ಅರ್ಜುನ್ ಸಿಂಗ್ ಸಹೋದರ ಸೌರವ್ ಸಿಂಗ್ ನೂತನ ಅಧ್ಯಕ್ಷ|

ಕೋಲ್ಕತ್ತಾ(ಜೂ.05): ಜೈ ಮಹಾ ಕಾಳಿ, ಜೈ ಶ್ರೀರಾಮ ಘೋಷಣೆಯೊಂದಿಗೆ ಪ.ಬಂಗಾಳಕ್ಕೆ ಲಗ್ಗೆ ಇಟ್ಟಿರುವ ಬಿಜೆಪಿ, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಪಾರಮ್ಯ ಮೆರೆದಿದೆ. 

ಲೋಕಸಭಾ ಚುನಾವಣೆ ಬಳಿಕ ಬಂಗಾಳದಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಬಿಜೆಪಿ ತನ್ನ ಸಾಮರ್ಥ್ಯ ಹೆಚ್ಚಿಸಿಕೊಂಡಿದೆ. 

ಒಟ್ಟು 34 ವಾರ್ಡ್‌ಗಳ ಪೈಕಿ 26 ಕೌನ್ಸಿಲರ್‌ಗಳು ಬಿಜೆಪಿ ಪರ ಮತ ನೀಡಿದ್ದು, 8 ಕೌನ್ಸಿಲರ್‌ಗಳು ಮತದಾನದಿಂದ ದೂರ ಉಳಿಯುವ ಮೂಲಕ ಪರೋಕ್ಷವಾಗಿ ಬಿಜೆಪಿಗೆ ಬೆಂಬಲ ಸೂಚಿಸಿದ್ದಾರೆ. 

ಇದೇ ಮೊದಲ ಬಾರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಆಡಳಿತ ಆರಂಭವಾಗಿದ್ದು, ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷಕ್ಕೆ ತೀವ್ರ ಮುಜುಗರವಾಗಿದೆ. 

ಭಾತ್‌ಪಾರಾ ನಗರಸಭೆಯಲ್ಲಿ ಬಿಜೆಪಿ ಜಯಭೇರಿ ಬಾರಿಸುವ ಮೂಲಕ ಟಿಎಂಸಿಯಿಂದ ಅಧಿಕಾರ ಕಸಿದುಕೊಂಡಿದೆ. ಉತ್ತರ 24 ಪರಗಣ ಜಿಲ್ಲೆಯ ಬರಾಕ್‌ಪೋರ್ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಅರ್ಜುನ್ ಸಿಂಗ್ ಅವರ ಸಹೋದರ ಸೌರವ್ ಸಿಂಗ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Actress Assault Case: ಆರು ಆರೋಪಿಗಳಿಗೆ 20 ವರ್ಷ ಜೈಲು ಶಿಕ್ಷೆ ಘೋಷಿಸಿದ ಕೇರಳ ಕೋರ್ಟ್‌
ಹುನುಗುಂದದಲ್ಲಿ ಮಂಕಿ ಕ್ಯಾಪ್ ಗ್ಯಾಂಗ್: ಒಂದೇ ರಾತ್ರಿ, 9 ಮನೆ ಕಳವು, ಪೋಲಿಸರ ಮನೆಗಳನ್ನೇ ಬಿಡದ ಖದೀಮರು!