
ಧಾರವಾಡ: ತಮಗೆ ಬಿಜೆಪಿ ಟಿಕೆಟ್ ಸಿಗದೇ ಅಮೃತ ದೇಸಾಯಿ ಅವರಿಗೆ ಟಿಕೆಟ್ ಸಿಕ್ಕ ಹಿನ್ನೆಲೆಯಲ್ಲಿ ‘ತೀವ್ರ ನೊಂದಿರುವ’ ಮಾಜಿ ಶಾಸಕಿ ಸೀಮಾ ಮಸೂತಿ ಅವರು ಧಾರವಾಡ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ.
ಸಂಸದ ಪ್ರಹ್ಲಾದ ಜೋಶಿ ಸೇರಿ ಹಲವರ ಮನವೊಲಿಕೆ ಯತ್ನ ವಿಫಲವಾದ ಬೆನ್ನಲ್ಲೇ ಬುಧವಾರ ಸಂಜೆ ದಿಢೀರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಎರಡು ದಶಕಗಳಿಂದ ಮಾಡಿದ ಕೆಲಸಕ್ಕೆ ಬೆಲೆ ಇಲ್ಲದಂತೆ ಮತ್ತೊಬ್ಬರಿಗೆ ಟಿಕೆಟ್ ನೀಡಿರುವುದ್ದು ಅಸಮಾಧಾನ ತಂದಿದೆ. ನೂರಾರು ಕಾರ್ಯಕರ್ತರು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಒತ್ತಾಯಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಏ.19ರಿಂದ 22ರೊಳಗೆ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ನಿರ್ಧರಿಸಿದ್ದೇನೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರೇ ಬಂದು ಮನವೊಲಿಸಿದರೂ ನನ್ನ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.