
ಲಖನೌ: ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಐತಿಹಾಸಿಕ ಜಯಭೇರಿ ಬಾರಿಸಿದ ಬಿಜೆಪಿ, ಇದೀಗ ದುರ್ಬಲವಿರುವ ಕಡೆ ಪಕ್ಷ ಸಂಘಟಿಸಲು ‘ಬ್ಲಡ್ ಡೈರೆಕ್ಟರಿ'ಯನ್ನು ಅಸ್ತ್ರವಾಗಿ ಬಳಸಿಕೊಳ್ಳಲು ಮುಂದಾಗಿದೆ.
70ನೇ ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಆ.14ರಂದು ರಾಜ್ಯದ ಎಲ್ಲ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ರಕ್ತದಾನ, ರಕ್ತ ಪರೀಕ್ಷೆ ಶಿಬಿರ ಆಯೋಜಿಸಲು ಬಿಜೆಪಿ ಉದ್ದೇಶಿಸಿದೆ.
ಆನಂತರ ‘ಬ್ಲಡ್ ಡೈರೆಕ್ಟರಿ' ಯೊಂದನ್ನು ಮುದ್ರಿಸಿ, ಎಲ್ಲ ಆಸ್ಪತ್ರೆಗಳಿಗೂ ಹಂಚುವ ಉದ್ದೇಶ ಹೊಂದಿದೆ. ರಕ್ತದ ಅಗತ್ಯವಿರುವವರು ಸಂಪರ್ಕಿಸಿದರೆ ಬಿಜೆಪಿ ಕಾರ್ಯಕರ್ತರು ರಕ್ತ ನೀಡುತ್ತಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.