ಟಿಪ್ಪು ಜಯಂತಿ: ನ.8ಕ್ಕೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

Published : Nov 06, 2016, 07:13 AM ISTUpdated : Apr 11, 2018, 12:41 PM IST
ಟಿಪ್ಪು ಜಯಂತಿ: ನ.8ಕ್ಕೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಸಾರಾಂಶ

ನ.8 ರ ಪ್ರತಿಭಟನೆಯ ಯಶಸ್ಸಿಗೆ ಶ್ರಮಿಸಿ ಪ್ರತೀ ಜಿಲ್ಲೆಯಲ್ಲಿ ಕನಿಷ್ಠ 1000 ಜನರು ಪಾಲ್ಗೊಳ್ಳುವಂತೆ ಮಾಡಲು ಇಂದಿನಿಂದಲೇ ಪ್ರಯತ್ನಿಸುವಂತೆ ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು(ನ. 06): ಬಿಜೆಪಿಯ ಎಲ್ಲಾ ಜಿಲ್ಲಾ ಘಟಕಗಳೂ ನವಂಬರ್ 8ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿವೆ. ಕೆಎಫ್'ಡಿ, ಎಸ್'ಡಿಪಿಐ ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್'ಐ) ಸಂಘಟನೆಗಳ ನಿಷೇಧಿಸಬೇಕು; ಟಿಪ್ಪು ಜಯಂತಿ ಆಚರಣೆ ನಿಲ್ಲಿಸಬೇಕು; ಹಾಗೂ ಎರಡೂವರೆ ವರ್ಷಗಳ ಅವಧಿಯಲ್ಲಿ ನಡೆದಿರುವ ಬಿಜೆಪಿ ಮತ್ತು ಪರಿವಾರ  ಕಾರ್ಯಕರ್ತರ ಹತ್ಯೆ ಪ್ರಕರಣದ ತನಿಖೆಯನ್ನು ಎನ್'ಐಎಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ಭಾರತೀಯ ಜನತಾ ಪಕ್ಷವು ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ.

ನಾಲ್ಕು ದಿನಗಳಿಂದ ಬೆಂಗಳೂರು ಹೊರವಲಯದಲ್ಲಿ ರಾಜ್ಯದ ಪ್ರಮುಖ ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿರುವ ಪ್ರಶಿಕ್ಷಣ ಶಿಬಿರ ಇಂದು ಮಧ್ಯಾಹ್ನ ಮುಕ್ತಾಯವಾಗಲಿದೆ. ನ.8 ರ ಪ್ರತಿಭಟನೆಯ ಯಶಸ್ಸಿಗೆ ಶ್ರಮಿಸಿ ಪ್ರತೀ ಜಿಲ್ಲೆಯಲ್ಲಿ ಕನಿಷ್ಠ 1000 ಜನರು ಪಾಲ್ಗೊಳ್ಳುವಂತೆ ಮಾಡಲು ಇಂದಿನಿಂದಲೇ ಪ್ರಯತ್ನಿಸುವಂತೆ ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ
ವೃದ್ಧೆಯ ಕೇರ್ ಟೇಕರ್‌ನಿಂದಲೇ ₹31 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಬಿಹಾರ ಮೂಲದ ಚಾಂದಿನಿ ಬಂಧನ!