ಬಿಜೆಪಿ ಕೋಟಿ ಕೋಟಿ ಆಫರ್ ಮಾಡಿದ್ದು ನಿಜ : ಸಿದ್ದರಾಮಯ್ಯ

Published : Jul 04, 2019, 01:04 PM IST
ಬಿಜೆಪಿ ಕೋಟಿ ಕೋಟಿ ಆಫರ್ ಮಾಡಿದ್ದು ನಿಜ : ಸಿದ್ದರಾಮಯ್ಯ

ಸಾರಾಂಶ

ಬಿಜೆಪಿ ಕೋಟಿ ಕೋಟಿ ಆಫರ್ ಮಾಡಿ ಜೆಡಿಎಸ್, ಕಾಂಗ್ರೆಸಿಗರನ್ನು ಸೆಳೆಯುತ್ತಿರುವುದು ನಿಜ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಮೈಸೂರು [ಜು.04]  : ಬಿಜೆಪಿಯವರು ಆಪರೇಷನ್ ಕಮಲ ಮಾಡುತ್ತಿರುವುದು ಸತ್ಯ. ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರಿಗೆ ಕೋಟಿ ಕೋಟಿ ಆಫರ್ ಮಾಡಿರುವುದು ನಿಜ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ ಪಿರಿಯಾಪಟ್ಟಣ ಶಾಸಕ ಮಹದೇವು ತಮಗೆ ಬಿಜೆಪಿ 30 ಕೋಟಿ ರು. ನೀಡಲು ಬಂದಿದ್ದಾಗಿ ಹೇಳಿದ್ದಾರೆ.ಮಹದೇವು ಅವರ ವಿಚಾರ ನನಗೆ ಸರಿಯಾಗಿ ಗೊತ್ತಿಲ್ಲ. ಆದರೆ ಆಪರೇಷನ್ ನಡೆಯುತ್ತಿದೆ ಎಂದರು. 

ನಮ್ಮ ಶಾಸಕರನ್ನು ದುಡ್ಡು ಕೊಟ್ಟು ಖರೀದಿ ಮಾಡಲು ಪ್ರಯತ್ನಿಸುತ್ತಿದ್ದಾರೆ. ಇಂತಹ ಪ್ರಯತ್ನ ಮಾಡಿ ವಿಫಲರಾಗಿದ್ದಾರೆ. ಏನೇ ಆದರೂ ಕೂಡ ಮೈತ್ರಿ ಸರ್ಕಾರಕ್ಕೆ ಯಾವುದೇ ಸಮಸ್ಯೆಯಾಗುವುದಿಲ್ಲ.  ಕಲ್ಲು ಬಂಡೆಯಂತೆ ಗಟ್ಟಿಯಾಗಿ ಇರಲಿದೆ ಎಂದು ಮೈಸೂರಿನಲ್ಲಿ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೆದ್ದಾರಿಯಲ್ಲಿ ಇಳಿದು ಕಾರಿಗೆ ಡಿಕ್ಕಿ ಹೊಡೆದ ವಿಮಾನ: ವೀಡಿಯೋ
ಬೆಂಗಳೂರಲ್ಲಿ ಹೊಟ್ಟೆಪಾಡಿಗೆ ಕಳ್ಳತನ ಮಾಡ್ತಿದ್ದ ಕಳ್ಳನನ್ನೇ ರಾಬರಿ ಮಾಡಿದ ಖತರ್ನಾಕ್ ಕಿತಾಪತಿಗಳು!