
ಮಂಡ್ಯ : ಸದ್ಯ ರಾಜ್ಯ ರಾಜಕಾರಣದಲ್ಲಿ ಆಂತರಿಕ ಕಲಹಗಳು ಹೆಚ್ಚಾಗುತ್ತಿವೆ. ಅತ್ತ ಮೈತ್ರಿ ಸರ್ಕಾರವನ್ನು ಉರುಳಿಸಲು ಸಾಕಷ್ಟು ಯತ್ನ ನಡೆಯುತ್ತಿದೆ ಎನ್ನುವ ಆರೋಪದ ನಡುವೆ ಬಿಜೆಪಿ ಮತ್ತೊಂದು ಭರ್ಜರಿ ಪ್ಲಾನ್ ನಡೆಸಿದೆ ಎನ್ನಲಾಗಿದೆ.
ದೋಸ್ತಿ ಸರ್ಕಾರವನ್ನು ಉರುಳಿಸಲು ಮಾಜಿ ಕಾಂಗ್ರೆಸ್ ಮುಖಂಡ ಹಾಲಿ ಬಿಜೆಪಿ ನಾಯಕ ಎಸ್.ಎಂ ಕೃಷ್ಣ ಅವರನ್ನು ಅಖಾಡಕ್ಕೆ ಇಳಿಸಲು ಕಮಲ ಪಾಳಯ ನಿರ್ಧರಿಸಿದೆ ಎನ್ನುವ ಮಾತು ಕೇಳಿ ಬಂದಿದೆ.
ಕೃಷ್ಣ ಅವರ ಬೆಂಬಲಿಗ ಶಾಸಕರನ್ನು ಬಿಜೆಪಿಗೆ ಕರೆತರಲು ಯತ್ನ ಆರಂಭ ಮಾಡಿದೆ. ಮಂಡ್ಯ ಜಿಲ್ಲೆಯ ಇಬ್ಬರು ಜೆಡಿಎಸ್ ಶಾಸಕರಿಗೆ ಬಿಜೆಪಿ ಗಾಳ ಹಾಕಿದೆ. ಶಾಸಕ ರವೀಂದ್ರ ಶ್ರೀಕಂಠಯ್ಯ ಹಾಗೂ ಹಾಗೂ ಕೆ.ಆರ್.ಪೇಟೆ ಕ್ಷೇತ್ರದ ಜೆಡಿಎಸ್ ಶಾಸಕ ಕೆ.ಸಿ.ನಾರಾಯಣ ಗೌಡಗೂ ಕೂಡ ಬಿಜೆಪಿ ಗಾಳ ಹಾಕಿದೆ.
ಅತ್ತು ಕರೆದು ಜೆಡಿಎಸ್ ನಿಂದ ಈ ಬಾರಿ ಟಿಕೆಟ್ ಗಿಟ್ಟಿಸಿದ್ದ ನಾರಾಯಣ ಗೌಡ ಕೆ.ಆರ್ ಪೇಟೆಯಿಂದ ಗೆಲುವು ಸಾಧಿಸಿದ್ದರು. ಇದು ಯಡಿಯೂರಪ್ಪ ಅವರ ತವರು ಕ್ಷೇತ್ರವಾಗಿದ್ದು, ಈ ಮೂಲಕ ಜೆಡಿಎಸ್ ಭದ್ರಕೋಟೆಗೆ ಬಿಜೆಪಿ ಕೈ ಹಾಕಿದೆ ಎನ್ನುವ ಮಾತು ಕೇಳಿ ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.