2014ಕ್ಕಿಂತ ಹೆಚ್ಚಿನ ಸ್ಥಾನಗಳಲ್ಲಿ ಬಿಜೆಪಿಗೆ ಭರ್ಜರಿ ಗೆಲುವು

By Web DeskFirst Published Sep 8, 2018, 3:42 PM IST
Highlights

ಲೋಕಸಭಾ ಚುನಾವಣೆಗೆ ಈಗಾಗಲೇ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಈ ನಿಟ್ಟಿನಲ್ಲಿ ವಿವಿಧ ವಿಚಾರಗಳ ಚರ್ಚೆಗೆ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು ಶನಿವಾರ ಸಭೆ ಆರಂಭವಾಗಿದೆ. ಸಭೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಮತ್ತೊಮ್ಮೆ ಕೇಂದ್ರದಲ್ಲಿ ಭರ್ಜರಿ ಬಹುಮತಗಳೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎನ್ನುವ ಭರವಸೆ ವ್ಯಕ್ತಪಡಿಸಿದ್ದಾರೆ. 

ನವದೆಹಲಿ :  ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಶನಿವಾರ ಆರಂಭಗೊಂಡಿದ್ದು, ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಯುತ್ತಿದೆ.

ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತೊಮ್ಮೆ ದೇಶದಲ್ಲಿ ಕಮಲ ಅರಳುವ ಭರವಸೆ ವ್ಯಕ್ತಪಡಿಸಿದ್ದು, ಈ ನಿಟ್ಟಿನಲ್ಲಿ ಯಾವ ರೀತಿ ಕಾರ್ಯಪೃವೃತ್ತರಾಗಬೇಕು ಎನ್ನುವ ಬಗ್ಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ.

ಅಲ್ಲದೇ ದೇಶದಲ್ಲಿ  2014ರಲ್ಲಿ ಬಿಜೆಪಿ 283 ಕ್ಷೇತ್ರಗಳಲ್ಲಿ ಗೆಲುವು ಪಡೆದು ಐತಿಹಾಸಿಕವಾಗಿ ಗೆಲುವನ್ನು ದಾಖಲಿಸಿದ್ದ ಬಿಜೆಪಿ ನೇತೃತ್ವದ ಎನ್ ಡಿಎ ಪಡೆ ಮತ್ತೊಮ್ಮೆ  2019ರ ಲೋಕಸಭಾ ಚುನಾವಣೆಯಲ್ಲಿ  365 ಕ್ಷೇತ್ರಗಳಲ್ಲಿ ಗೆಲುವಿನ ನಿರೀಕ್ಷೆ ಇಟ್ಟುಕೊಂಡಿದ್ದು, ಭರ್ಜರಿ ಗೆಲುವಿನೊಂದಿಗೆ ಕೇಂದ್ರದ ಆಡಳಿತ ಚುಕ್ಕಾಣಿ ಹಿಡಿಯುವುದು ಖಚಿತ ಎಂದಿದ್ದಾರೆ.   

ಈಗಾಗಲೇ ದೇಶದ  22 ರಾಜ್ಯಗಳಲ್ಲಿ ಸದ್ಯ ಬಿಜೆಪಿ ಅಧಿಕಾರದಲ್ಲಿ ಇದ್ದು, ಇನ್ನು ಮುಂದೆಯೂ ಕೂಡ ಬಿಜೆಪಿ ಸದಾ ಅಜಯವಾಗಿರಬೇಕು ಎನ್ನುವ ನಿಟ್ಟಿನಲ್ಲಿ ಅಜಯ್ ಬಿಜೆಪಿ ಎನ್ನುವ ಘೋಷ ವಾಕ್ಯವನ್ನು ಅಳವಡಿಸಿಕೊಳ್ಳಲು ರಾಜ್ಯ ಘಟಕದ ನಾಯಕರಿಗೆ ಶಾ ಸೂಚಿಸಿದ್ದಾರೆ.  

ಇನ್ನು ಕೆಲವೇ ತಿಂಗಳಲ್ಲಿ ಐದು ರಾಜ್ಯಗಳಾದ ತೆಲಂಗಾಣ, ರಾಜಸ್ಥಾನ, ಮಧ್ಯ ಪ್ರದೇಶ, ಚತ್ತೀಸ್ ಗಢದಲ್ಲಿ ಚುನಾವಣೆ ನಡೆಯುತ್ತಿದ್ದು, ಈ ರಾಜ್ಯಗಳಲ್ಲಿ ಕಮಲ ಅರಳಿಸುವ ಉದ್ದೇಶದಿಂದ ಹೆಚ್ಚಿನ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಗೆಲುವಿನತ್ತ ಗುರಿ ನೆಡಬೇಕು. ಆ ಗೆಲುವಿಗಾಗಿ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎನ್ನುವುದನ್ನು ಸಭೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ.

ಬಿಜೆಪಿಗೆ 365 ಪ್ಲಸ್ ಗುರಿ, ನಮೋ ಭಾರತ್ ಪಡೆ ಅಸ್ತಿತ್ವಕ್ಕೆ
click me!