
ಬೆಂಗಳೂರು [ಜು.17] : ಕರ್ನಾಟಕ ರಾಜಕೀಯ ಪ್ರಹಸನದ ಬಗ್ಗೆ ಸುಪ್ರೀಂ ಕೋರ್ಟ್ ನಿಂದ ಪ್ರಕಟವಾದ ಮಹತ್ವದ ತೀರ್ಪನ್ನು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಸ್ವಾಗತಿಸಿದ್ದಾರೆ.
ವಿಶ್ವಾಸಮತಕ್ಕೆ ಆಗಮಿಸಲು ಅತೃಪ್ತರಿಗೆ ಒತ್ತಡ ಹೇರಲು ಅವಕಾಶವಿಲ್ಲ. ಈ ನಿಟ್ಟಿನಲ್ಲಿ ಸದನದಲ್ಲಿ ಬಿಜೆಪಿ ಬಹುಮತ ಹೊಂದಲು ಅವಕಾಶ ಇದೆ ಎಂದು ಪೂಜಾರಿ ಹೇಳಿದ್ದಾರೆ.
ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಮೈತ್ರಿ ಸರ್ಕಾರದ ಸಚಿವರು ಅತೃಪ್ತ ಶಾಸಕರನ್ನು ಅನರ್ಹ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಈ ರೀತಿಯಾಗಿ ಒತ್ತಡ ಹೇರುವುದು ಸಚಿವ ಸ್ಥಾನಕ್ಕೆ ಶೋಭೆ ತರುವುದಿಲ್ಲ ಎಂದರು.
ಮೈತ್ರಿ ಸರ್ಕಾರ ಪತನದ ಅಂಚಿನಲ್ಲಿ ಇದ್ದು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೂಡಲೇ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮುಖಂಡ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.