
ಹಾಸನ/ತುಮಕೂರು [ಜು.08] : ರಾಜ್ಯ ಸಮ್ಮಿಶ್ರ ಸರ್ಕಾರ ಅಲ್ಪಮತಕ್ಕೆ ಕುಸಿ ಯುವ ಸಾಧ್ಯತೆಯ ನಡುವೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮಧ್ಯಂತರ ಚುನಾವಣೆಯ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಯಾವುದೇ ಕಾರಣಕ್ಕೂ ನಾವು ಮಧ್ಯಂತರ ಚುನಾವಣೆಗೆ ಅವಕಾಶ ನೀಡುವುದಿಲ್ಲ, ಆದರೆ ರಾಜ್ಯಪಾಲರು ಆಹ್ವಾನ ನೀಡದೆ ನಾವು ಸರ್ಕಾರ ರಚನೆಗೆ ಮುಂದಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ತುಮಕೂರು ಹಾಗೂ ಹಾಸನ ಜಿಲ್ಲೆಯ ಚನ್ನ ರಾಯಪಟ್ಟಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ದೋಸ್ತಿ ಪಕ್ಷಗಳ 13 ಶಾಸಕರು ಸಲ್ಲಿಸಿರುವ ರಾಜೀನಾಮೆ ಬಗ್ಗೆ ವಿಧಾನ ಸಭಾಧ್ಯಕ್ಷರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂಬುದನ್ನು ನೋಡಿ ಕೊಂಡು ಮುಂದಿನ ಹೆಜ್ಜೆಯಿಡಲಾಗುವುದು. ನನ್ನ ಪ್ರಕಾರ ಈ ಸರ್ಕಾರ ಬಹುಮತ ಕಳೆದುಕೊಂಡಿದೆ. ಮುಂದೇನು ಎಂಬ ಕುರಿತು ತೀರ್ಮಾನಿಸಬೇಕಿರು ವುದು ಮುಖ್ಯಮಂತ್ರಿಗಳು ಹಾಗೂ ಸ್ಪೀಕರ್. ಎಲ್ಲವೂ ಅವರ ನಿರ್ಧಾರದ ಮೇಲೆ ಅವಲಂಬಿತವಾಗಿದೆ ಎಂದರು.
ಸರ್ಕಾರ ರಚನೆಗೆ ಸಿದ್ಧ: ಒಂದು ವೇಳೆ ಸಮ್ಮಿಶ್ರ ಸರ್ಕಾರ ಪತನವಾಗಿ ರಾಜ್ಯಪಾಲರು ಸರ್ಕಾರ ರಚನೆಗೆ ಆಹ್ವಾನ ನೀಡಿದರೆ ನಾವು ಮುಂದಿನ ಹೆಜ್ಜೆ ಇಡುತ್ತೇವೆ. ನಾವ್ಯಾರೂ ಸನ್ಯಾಸಿಗಳಲ್ಲ. ಹಾಗಂತ ಸರ್ಕಾರ ರಚನೆ ವಿಚಾರವಾಗಿ ನಾವಾಗಿಯೇ ರಾಜ್ಯಪಾಲರನ್ನಾಗಲಿ, ದೆಹಲಿ ನಾಯಕರನ್ನಾಗಲಿ ಭೇಟಿ ಮಾಡುವುದಿಲ್ಲ. ಮುಂಬೈನಲ್ಲಿ ರುವ ಶಾಸಕರನ್ನೂ ಸಂಪರ್ಕಿಸುವುದಿಲ್ಲ. ಜು.12 ರಿಂದ ರಾಜ್ಯದಲ್ಲಿ ಮಳೆಗಾಲದ ಅಧಿವೇಶನ ಆರಂಭವಾಗಲಿದ್ದು, ಅದಕ್ಕೂ ಮುನ್ನ ಏನೇನು ರಾಜಕೀಯ ಬೆಳವಣಿಗೆ ಆಗುತ್ತದೆ ಎಂಬುದನ್ನು ಗಮನಿಸುತ್ತಿದ್ದೇವೆ.
ಪ್ರಸ್ತುತ ರಾಜಕೀಯ ವಿದ್ಯಮಾನ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮುಖಂಡರೊಂದಿಗೆ ಚರ್ಚೆ ನಡೆಸಿ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದರು. ಇದೇ ವೇಳೆ, ರಾಜ್ಯ ವಿಧಾನಸಭೆ ಅವಧಿ ಇನ್ನೂ ನಾಲ್ಕು ವರ್ಷ ಬಾಕಿ ಇರುವುದರಿಂದ ಬಿಜೆಪಿ ಚುನಾವಣೆಗೆ ಹೋಗಲು ಸಿದ್ಧವಿಲ್ಲ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯುವುದಿಲ್ಲ, ಅದಕ್ಕೆ ನಾವು ಅವಕಾಶವನ್ನೂ ನೀಡುವುದಿಲ್ಲ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.
ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ಮುಖಂಡರು ‘ರಿವರ್ಸ್ ಆಪರೇಷನ್’ ಮಾಡುವ ಕುರಿತು ಮಾತನಾಡುತ್ತಿದ್ದಾರಲ್ವಾ ಎಂಬ ಪತ್ರಕರ್ತರ ಪ್ರಶ್ನೆಗೆ ಬಿಜೆಪಿಯ 105 ಶಾಸಕರು ಒಗ್ಗಟ್ಟಿನಿಂದಿದ್ದು, ಅವರನ್ನು ಇತರೆ ಪಕ್ಷದವರು ಸೆಳೆಯುವುದು ಅಸಾಧ್ಯದ ಮಾತುಗಳಷ್ಟೆ. ಕಾಂಗ್ರೆಸ್, ಜೆಡಿಎಸ್ ನಶಿಸಿ ಹೋಗುತ್ತಿರುವ ಪಕ್ಷಗಳು. ಇಂತಹ ಪಕ್ಷಗಳಿಗೆ ಯಾವ ಶಾಸಕರೂ ಹೋಗಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.