‘ಬಿಜೆಪಿ ಬಳಿ ಇದೆ ವಿಶ್ವಾಸಮತಕ್ಕೆ ಬೇಕಾದ ಅಗತ್ಯ ಸಂಖ್ಯೆ’

Published : Jul 27, 2019, 08:33 AM IST
‘ಬಿಜೆಪಿ ಬಳಿ ಇದೆ ವಿಶ್ವಾಸಮತಕ್ಕೆ ಬೇಕಾದ ಅಗತ್ಯ ಸಂಖ್ಯೆ’

ಸಾರಾಂಶ

ಬಿಜೆಪಿ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಿದೆ. ಇದೀಗ ವಿಶ್ವಾಸಮತ ಪರೀಕ್ಷೆಯೊಂದು ಬಾಕಿ ಇದ್ದು, ಇದರಲ್ಲಿ ಗೆಲ್ಲುವ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದೆ.

ಬೆಂಗಳೂರು [ಜು.27]: ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಬಹುಮತ ಸಾಬೀತಪಡಿಸಲಿದ್ದಾರೆ. ನಾವು ಬಹುಮತಕ್ಕೆ ಅಗತ್ಯವಾದ ಸಂಖ್ಯೆಯನ್ನು ಹೊಂದಿದ್ದೇವೆ ಎಂದು ಬಿಜೆಪಿಯ ಹಿರಿಯ ಶಾಸಕ ಜೆ.ಸಿ.ಮಾಧುಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಹುಮತ ಸಂಖ್ಯೆ ವಿಚಾರವಾಗಿ ವಿರೋಧ ಪಕ್ಷಗಳು ಗೊಂದಲ ಸೃಷ್ಟಿಸುತ್ತಿವೆ ಎಂದು ಟೀಕಿಸಿದರು. ಸಂವಿಧಾನದ ಪ್ರಕಾರ ವಿಶ್ವಾಸ ಮತಯಾಚನೆ ದಿನ ಸಭೆಯಲ್ಲಿ ಎಷ್ಟು ಸದಸ್ಯರು ಹಾಜರಿರುತ್ತಾರೆಯೋ ಆ ಸಂಖ್ಯೆ ಆಧಾರದ ಮೇರೆಗೆ ಬಹುಮತ ಸಾಬೀತು ನಡೆಯಲಿದೆ.

ಹೀಗಿರುವಾಗ ಅವರು (ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು) ಹೇಳಿದಂತೆ 111 ಸಂಖ್ಯೆ ಬೇಕಾಗಿಲ್ಲ. ಯಡಿಯೂರಪ್ಪನವರು ನೂರಕ್ಕೆ ನೂರರಷ್ಟು ಬಹುಮತ ಪಡೆಯಲಿದ್ದಾರೆ. ಇದಕ್ಕೆ ಅಗತ್ಯವಾದ ಸಂಖ್ಯೆಯನ್ನು ನಾವು ಹೊಂದಿದ್ದೇವೆ ಎಂದು ಸ್ಪಷ್ಟಪಡಿಸಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗ್ರೀನ್ ಕಾರ್ಡ್ ಸಂದರ್ಶನದ ವೇಳೆ 30 ವರ್ಷಗಳಿಂದ ಅಮೆರಿಕಾದಲ್ಲಿ ವಾಸವಿದ್ದ ಭಾರತೀಯ ಮಹಿಳೆಯ ಬಂಧನ
ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?