ಎಸ್ಸಿ, ಎಸ್ಟಿ ಮೀಸಲಾತಿಯನ್ನು ಬಿಜೆಪಿ ತೆಗೆದು ಹಾಕಲ್ಲ; ಬೇರೆಯವರಿಗೂ ತೆಗೆಯಲು ಬಿಡಲ್ಲ: ಅಮಿತ್ ಶಾ

By Suvarna Web DeskFirst Published Apr 4, 2018, 6:55 PM IST
Highlights

ದಲಿತ ದೌರ್ಜನ್ಯ ಕಾಯ್ದೆ ಸಡಿಲಗೊಳಿಸಿರುವ ಸುಪ್ರೀಂಕೋರ್ಟ್ ಆದೇಶವನ್ನು ಖಂಡಿಸಿ ದೇಶಾದ್ಯಂತ ದಲಿತ ಸಂಘಟನೆಗಳು ಪ್ರತಿಭಟನೆಗಿಳಿದಿರುವ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಪರವಾಗಿಯೇ ಬ್ಯಾಟಿಂಗ್ ಮಾಡಿದ್ದಾರೆ.  ಉದ್ಯೋಗ ಮತ್ತು ಶಿಕ್ಷಣದಲ್ಲಿ  ಎಸ್ಸಿ. ಎಸ್ಟಿ ಕಾಯ್ದೆಗಿರುವ ಮೀಸಲಾತಿಯನ್ನು ಬಿಜೆಪಿ ತೆಗೆದು ಹಾಕುವುದಿಲ್ಲ. ಬೇರೆಯವರಿಗೂ ತೆಗದು ಹಾಕಲು ಬಿಡುವುದಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ. 

ಬೆಂಗಳೂರು (ಏ. 04): ದಲಿತ ದೌರ್ಜನ್ಯ ಕಾಯ್ದೆ ಸಡಿಲಗೊಳಿಸಿರುವ ಸುಪ್ರೀಂಕೋರ್ಟ್ ಆದೇಶವನ್ನು ಖಂಡಿಸಿ ದೇಶಾದ್ಯಂತ ದಲಿತ ಸಂಘಟನೆಗಳು ಪ್ರತಿಭಟನೆಗಿಳಿದಿರುವ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಪರವಾಗಿಯೇ ಬ್ಯಾಟಿಂಗ್ ಮಾಡಿದ್ದಾರೆ.  ಉದ್ಯೋಗ ಮತ್ತು ಶಿಕ್ಷಣದಲ್ಲಿ  ಎಸ್ಸಿ. ಎಸ್ಟಿ ಕಾಯ್ದೆಗಿರುವ ಮೀಸಲಾತಿಯನ್ನು ಬಿಜೆಪಿ ತೆಗೆದು ಹಾಕುವುದಿಲ್ಲ. ಬೇರೆಯವರಿಗೂ ತೆಗದು ಹಾಕಲು ಬಿಡುವುದಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ. 

ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ರೂಪಿಸಿದ ಸಂವಿಧಾನವನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ. ಯಾರೂ ಆ ಧೈರ್ಯ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.  ದಲಿತ ಸಂಘಟನೆಗಳು ದೇಶಾದ್ಯಂತ ಕರೆ ನೀಡಿರುವ ಪ್ರತಿಭಟನೆಯಲ್ಲಿ ನಡೆದ ಸಾವಿಗೆ ಕಾಂಗ್ರೆಸ್ ಮತ್ತು ವಿಪಕ್ಷಗಳೇ ಕಾರಣ ಎಂದು ಆರೋಪಿಸಿದ್ದಾರೆ.  ಸುಪ್ರೀಂಕೋರ್ಟ್ ಆದೇಶವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಮೇನ್ಮನವಿ ಸಲ್ಲಿಸಿದೆ. 

click me!