‘ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿಗೆ ಹೆಚ್ಚಿನ ಅಂತರದ ಗೆಲುವು’

By Web DeskFirst Published May 18, 2019, 2:01 PM IST
Highlights

ರಾಜ್ಯದಲ್ಲಿ  ಲೋಕಸಭಾ ಚುನಾವಣೆ ಮುಕ್ತಾಯವಾಗಿದ್ದು, ಇದೀಗ ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದೆ. ಇದೇ ವೇಳೆ ನಾಯಕರು ತಮ್ಮ ಪಕ್ಷಗಳ ಬಗ್ಗೆ ಭವಿಷ್ಯ ನುಡಿಯುತ್ತಿದ್ದಾರೆ. 

ಶಿವಮೊಗ್ಗ : ರಾಜ್ಯದಲ್ಲಿ ಬಿಜೆಪಿ ಅತೀ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಿಜೆಪಿ ಮುಖಂಡ ಆಯನೂರು ಮಂಜುನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಬಿಜೆಪಿ ಶಿವಮೊಗ್ಗ ಕ್ಷೇತ್ರದಲ್ಲಿ ಈ ಬಾರಿ  ಅತೀ ಹೆಚ್ಚಿನ ಅಂತರದಿಂದ ಗೆಲುವು ಪಡೆಯಲಿದೆ. ದೇಶದಲ್ಲಿ 300ಕ್ಕೂ ಹೆಚ್ಚು ಸ್ಥಾನಗಳು ಬಿಜೆಪಿ ಪಾಲಾಗಲಿದೆ ಎಂದರು. 

ರಾಜ್ಯದಲ್ಲಿ ಮೈತ್ರಿ ಕೂಟದಲ್ಲಿ ಮುಖ್ಯಮಂತ್ರಿ ಯಾರಾಗಬೇಕೆಂಬ ಕಿತ್ತಾಟ ಆರಂಭವಾಗಿದೆ. ಸಿದ್ದರಾಮಯ್ಯ, ರೇವಣ್ಣ, ಡಿಕೆಶಿ ಎಲ್ಲರೂ ಸಿಎಂ ರೇಸ್ ನಲ್ಲಿ ಇರುವುದರಿಂದ ಗೊಂದಲ ಹೆಚ್ಚಾಗಿದೆ. ಇದರಿಂದ ಸಮ್ಮಿಶ್ರ ಸರ್ಕಾರ ಪತನವಾಗುತ್ತದೆ. ಬಳಿಕ ಬಿಜೆಪಿ ನಿಶ್ಚಿತವಾಗಿ ಅಧಿಕಾರ ಗದ್ದುಗೆಗೆ ಏರಲಿದೆ ಎಂದು ಆಯನೂರು ಮಂಜುನಾಥ್ ಹೇಳಿದರು.  

ಇನ್ನು ಇದೇ ವೇಳೆ ಶಿವಮೊಗ್ಗ ನಗರದ ಅವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು ಇಲ್ಲಿರುವ ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯಲ್ಲಿ ರಸ್ತೆ, ಚರಂಡಿ, ದೀಪದ ಯಾವುದೇ ವ್ಯವಸ್ಥೆ ಇಲ್ಲ. ಮಹಾನಗರ ಪಾಲಿಕೆ ಆಯುಕ್ತೆ , ಉಪ ಆಯುಕ್ತೆ ಇಬ್ಬರೂ ಪಾಲಿಕೆ ಸದಸ್ಯರಿಗೆ ಕಿಂಚಿತ್ತು ಗೌರವವನ್ನು ನೀಡುವುದಿಲ್ಲ. ದುರಹಂಕಾರದಿಂದ ವರ್ತಿಸುವ ಅವರು ಸರಿಯಾಗಿ ಸಮಸ್ಯೆಗಳನ್ನು ಆಲಿಸುವುದನ್ನೇ ಮರೆತಿದ್ದಾರೆ ಎಂದು ಕಿಡಿಕಾರಿದರು. 

ಶಿವಮೊಗ್ಗ ನಗರದಲ್ಲಿ ಸ್ವಚ್ಛತೆ ಇಲ್ಲ.  ಕರ್ನಾಟಕ ಮುನಿಸಿಪಲ್ ಆ್ಯಕ್ಟ್ ಸರಿಯಾಗಿ ಪಾಲನೆಯಾಗುತ್ತಿಲ್ಲ. ಪ್ರಭಾವಿ ರಾಜಕಾರಣಿಗಳು ಇರುವ ಜಿಲ್ಲೆಯಲ್ಲಿ ಅಧಿಕಾರಿಗಳು ಆಟ ಆಡುತ್ತಿದ್ದಾರೆ. ಪಾಲಿಕೆ ಆಯುಕ್ತರು ಶಿವಮೊಗ್ಗವನ್ನು ಜಂಗಲ್ ರಾಜ್ ಮಾಡಿದ್ದಾರೆ. ಬೀದಿ ಬದಿಯ ವ್ಯಾಪಾರಿಗಳಿಗೆ ದುಡಿದು ತಿನ್ನುವ ಅವಕಾಶ ಕಲ್ಪಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.

click me!