'ಕರ್ನಾಟಕವನ್ನೂ ಕಾಂಗ್ರೆಸ್ ಮುಕ್ತ ಮಾಡುತ್ತೇವೆ'

Published : Dec 25, 2017, 09:04 AM ISTUpdated : Apr 11, 2018, 12:43 PM IST
'ಕರ್ನಾಟಕವನ್ನೂ ಕಾಂಗ್ರೆಸ್ ಮುಕ್ತ ಮಾಡುತ್ತೇವೆ'

ಸಾರಾಂಶ

ದೇಶದಲ್ಲಿ ಪಂಜಾಬ್ ಮತ್ತು ಕರ್ನಾಟಕ ಬಿಟ್ಟರೆ ಎಲ್ಲೂ ಕಾಂಗ್ರೆಸ್‌ಗೆ ನೆಲೆಯಿಲ್ಲ. ಇಲ್ಲಿಂದಲೂ ಕಾಂಗ್ರೆಸ್ ಮುಕ್ತಗೊಳಿಸಿದರೆ ದೇಶದಲ್ಲಿ ಹುಡುಕಿದರೂ ಕಾಂಗ್ರೆಸ್ ಸಿಗದ ಪರಿಸ್ಥಿತಿ ಉಂಟಾಗುತ್ತದೆ. ಅದನ್ನು ನಾವು ಮಾಡಿಯೇ ತೀರುತ್ತೇವೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ ಸಿಂಗ್ ಚೌಹಾಣ್ ಘೋಷಿಸಿದ್ದಾರೆ.

ಬೆಂಗಳೂರು (ಡಿ.25): ದೇಶದಲ್ಲಿ ಪಂಜಾಬ್ ಮತ್ತು ಕರ್ನಾಟಕ ಬಿಟ್ಟರೆ ಎಲ್ಲೂ ಕಾಂಗ್ರೆಸ್‌ಗೆ ನೆಲೆಯಿಲ್ಲ. ಇಲ್ಲಿಂದಲೂ ಕಾಂಗ್ರೆಸ್ ಮುಕ್ತಗೊಳಿಸಿದರೆ ದೇಶದಲ್ಲಿ ಹುಡುಕಿದರೂ ಕಾಂಗ್ರೆಸ್ ಸಿಗದ ಪರಿಸ್ಥಿತಿ ಉಂಟಾಗುತ್ತದೆ. ಅದನ್ನು ನಾವು ಮಾಡಿಯೇ ತೀರುತ್ತೇವೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜಸಿಂಗ್ ಚೌಹಾಣ್ ಘೋಷಿಸಿದ್ದಾರೆ.

ಹಾವೇರಿಯಲ್ಲಿ ಭಾನುವಾರ ನಡೆದ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಸಿದ್ದರಾಮಯ್ಯ ಎಲ್ಲಿಯವರೆಗೆ ಮುಖ್ಯಮಂತ್ರಿಯಾಗಿರುತ್ತಾರೆಯೋ ಅಲ್ಲಿಯವರೆಗೆ ಕರ್ನಾಟಕದ ಜನತೆಗೆ  ಸುಖವಿಲ್ಲ.

 ಇಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಯಾರೂ ಸುರಕ್ಷಿತವಾಗಿಲ್ಲ. ಅತ್ಯಾಚಾರಿಗಳು, ಕೊಲೆ ಆರೋಪಿಗಳನ್ನು ರಕ್ಷಿಸುತ್ತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವ ಕೆಲಸವನ್ನು ಜನತೆ ಮಾಡಬೇಕು ಎಂದರು.

ರಾಜ್ಯದ ಹಣ ಲೂಟಿ: ರಾಜ್ಯದ ಜನರ ಹಣವನ್ನು ಲೂಟಿ ಹೊಡೆದು ಮುಖ್ಯಮಂತ್ರಿ ಪಕ್ಷದವರಿಗೆ ಕೊಡುತ್ತಿದ್ದಾರೆ ಎಂದು ಆರೋಪಿಸಿದ ಚೌಹಾಣ್ ರಾಜ್ಯದಲ್ಲಿ ನಡೆಯುತ್ತಿರುವ ಮರಳು ಮಾಫಿಯಾ, ಗ್ರಾನೈಟ್ ಮಾಫಿಯಾಗಳ ಉಲ್ಲೇಖ ಮಾಡಿದರು. ಇಲ್ಲಿ ಮರಳನ್ನು ಲೂಟಿ ಹೊಡೆದು, ಬಡವರಿಗೆ ಸಿಗದಂತೆ ಮಾಡಿ ಈಗ ಮಲೇಷ್ಯಾದಿಂದ ಮರಳು ಆಮದು ಮಾಡಿಕೊಳ್ಳುತ್ತಿದ್ದಾರೆ. ಇಲ್ಲಿಯ ಮರಳನ್ನು ಕಾಂಗ್ರೆಸ್ ನಾಯಕರು ತಿಂದು ಹಾಕುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಎಲ್ಲಾ ಖಚು ವೆಚ್ಚಗಳಿಗೆ ರಾಜ್ಯದಿಂದ ಹಣ ಹೋಗುತ್ತಿದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಡ್ನಿ ಶೂಟಿಂಗ್ ದಾಳಿಗೆ ಪಾಕಿಸ್ತಾನ ಸಂಪರ್ಕ: ಆರೋಪಿ ಲಾಹೋರ್ ಮೂಲದ ನವೀದ್ ಅಕ್ರಮ್; ಫೋಟೋ ವೈರಲ್!
ತುರುವೇಕೆರೆ: ದೇವರ ಮೇಲೆ ಹಾಕಿದ್ದ 500 ಗ್ರಾಂ ಸರ, 10 ಸಾವಿರ ರೂ. ನಗದು ಕದ್ದ ಕಳ್ಳರು!