
ನವದೆಹಲಿ: ಪಶ್ಚಿಮ ಬಂಗಾಳದ ಒಂದೊಂದೇ ನಗರ ಸ್ಥಳೀಯ ಸಂಸ್ಥೆಯಲ್ಲಿ ಅಧಿಕಾರ ಹಿಡಿಯುತ್ತಿರುವ ಬಿಜೆಪಿ, ಇದೀಗ ಡಾರ್ಜಿಲಿಂಗ್ ನಗರಪಾಲಿಕೆಯಲ್ಲಿ ಸ್ಪಷ್ಟಬಹುಮತ ಪಡೆದುಕೊಂಡಿದೆ. 32 ಸದಸ್ಯ ಬಲದ ಡಾರ್ಜಿಲಿಂಗ್ ನಗರಪಾಲಿಕೆಯ 17 ಸದಸ್ಯರು ಗೋರ್ಖಾ ಜನಮುಕ್ತಿ ಮೋರ್ಚಾ ತೊರೆದು ದೆಹಲಿಯಲ್ಲಿ ಶನಿವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಇದರೊಂದಿಗೆ ಆ ಪಾಲಿಕೆಯಲ್ಲಿ ಬಿಜೆಪಿಗೆ ಬಹುಮತ ದೊರೆತಂತಾಗಿದೆ. ಮೂರು ದಿನಗಳ ಹಿಂದಷ್ಟೇ ತೃಣಮೂಲ ಕಾಂಗ್ರೆಸ್ ಸದಸ್ಯರನ್ನು ಸೆಳೆದು, ಬಂಗಾಳದ ಭಾಟ್‌ಪರಾ ನಗರಪಾಲಿಕೆಯಲ್ಲಿ ಬಿಜೆಪಿ ತನ್ನ ಪತಾಕೆ ಹಾರಿಸಿತ್ತು.
ತನ್ಮೂಲಕ ಪಶ್ಚಿಮ ಬಂಗಾಳದ ಸ್ಥಳೀಯ ಸಂಸ್ಥೆಯೊಂದರಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೇರಿತ್ತು. ಇದೀಗ ಬಂಗಾಳದಲ್ಲಿ 2ನೇ ನಗರಪಾಲಿಕೆಯನ್ನು ಆ ಪಕ್ಷ ವಶಕ್ಕೆ ತೆಗೆದುಕೊಂಡಿದೆ. ಗೋರ್ಖಾ ಜನಮುಕ್ತಿ ಮೋರ್ಚಾ ಕಳೆದ ಜನವರಿಯಲ್ಲಷ್ಟೇ ಬಿಜೆಪಿ ಜತೆಗಿನ ಮೈತ್ರಿಯನ್ನು ಕಡಿದುಕೊಂಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.