
ಹೈದ್ರಾಬಾದ್ : ತಾವು ತೆಲಂಗಾಣದ ಮಗಳು ಎಂದು ಭಾರತೀಯ ಜನತಾ ಯುವ ಮೋರ್ಚಾ ಅಧ್ಯಕ್ಷೆ ಪೂನಮ್ ಮಹಾಜನ್ ಹೇಳಿದ್ದಾರೆ. ಡಿಸೆಂಬರ್ 11 ರಂದು ತೆಲಂಗಾಣದ ಚುನಾವಣಾ ಫಲಿತಾಂಶ ಪ್ರಕಟವಾಗಲಿದ್ದು, ಇಲ್ಲಿ ಕಮಲ ಅರಳಲಿದೆ ಎಂದು ಹೇಳಿದ್ದಾರೆ.
ಪೂನಮ್ ಮಹಾಜನ್ ಮಾಜಿ ಕೆಂದ್ರ ಸಚಿವ ಪ್ರಮೋದ್ ಮಹಾಜನ್ ಅವರ ಪುತ್ರಿಯಾಗಿದ್ದು, ಮಹಾಜನ್ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ತೆಲಂಗಾಣದ ಮಹಬುನಗರದಲ್ಲಿ ಪ್ರಮೋದ್ ಮಹಾಜನ್ ಅವರು ಜನಿಸಿದ್ದು, ತಾವೂ ತೆಲಂಗಾಣದ ಮಗಳು, ಆಂಧ್ರ ಪ್ರದೇಶದ ಸೊಸೆ ಎಂದು ಹೇಳಿದ್ದಾರೆ.
ಹೈದ್ರಾಬಾದ್ ನಲ್ಲಿ ನಡೆದ ಸಮಾರಂಭವೊಂದರಲ್ಲಿ ಮಾತನಾಡಿದ ಅವರು ಈ ವಿಚಾರವನ್ನು ತಿಳಿಸಿದ್ದಾರೆ.
ಇನ್ನು ಯುವ ಮೋರ್ಚಾ ಎನ್ನುವುದು ಸೇತುವೆಯಂತೆ ಕೆಲಸ ಮಾಡುತ್ತದೆ. ನರೇಂದ್ರ ಮೋದಿ ಅವರಂತಹ ಪ್ರಧಾನಿಯನ್ನು ಪಡೆದಿರುವುದು ಅದೃಷ್ಟ ಎಂದು ಅವರು ಹೇಳಿದ್ದಾರೆ.
ಡಿಸೆಂಬರ್ 7 ರಂದು ರಾಜ್ಯದಲ್ಲಿ ಚುನಾವಣೆ ನಡೆಯಲಿದ್ದು, 11 ರಂದು ಫಲಿತಾಂಶ ಪ್ರಕಟವಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ