
ಗೋರಖ್’ಪುರ : ಬಿಜೆಪಿಯಿಂದ ಇದೀಗ ದೊಡ್ಡ ಮಾಹಿತಿಯೊಂದು ಹೊರಬಿದ್ದಿದೆ. ಇದರಲ್ಲಿ ಮುಂದಿನ ಬಾರಿ ಗೋರಖ್’ಪುರದಲ್ಲಿ ನಡೆಯಲಿರುವ ಲೋಕಸಭಾ ಉಪಚುನಾವಣೆಯ ಅಭ್ಯರ್ಥಿಯನ್ನು ಯೋಗಿ ಆಶಯಕ್ಕೆ ವಿರುದ್ಧವಾಗಿ ಅಮಿತ್ ಶಾ ಆಯ್ಕೆ ಮಾಡಿದ್ದಾರೆ.
ಇಲ್ಲಿನ ಸಂಸದರಾಗಿದ್ದ ಯೋಗಿ ಆದಿತ್ಯನಾಥ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾದ ಹಿನ್ನೆಲೆಯಲ್ಲಿ ಅವರು ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಸಲಾಗುತ್ತಿದೆ.
ಇಲ್ಲಿ ನಡೆಯುವ ಚುನಾವಣೆಗೆ ಮೊದಲ ಬಾರಿಗೆ ಅರ್ಚಕರಲ್ಲದ ಅಭ್ಯರ್ಥಿಯನ್ನು ನಿಲ್ಲಿಸಲು ಬಿಜೆಪಿ ತೀರ್ಮಾನ ಮಾಡಿದೆ. ಬಿಜೆಪಿ ಚುನಾವಣಾ ಅಭ್ಯರ್ಥಿಯಾಗಿ ಉಪೇಂದ್ರ ಶುಕ್ಲಾ ಅವರನ್ನು ಆಯ್ಕೆ ಮಾಡಲಾಗಿದ್ದು, ಇದರಿಂದ ಅನೇಕ ವರ್ಷಗಳಿಂದ ನಡೆದುಕೊಂಡು ಬಂದಿದ್ದ ಅಲಿಖಿತ ನಿಯಮವೊಂದು ಮುರಿದು ಬಿದ್ದಂತಾಗಿದೆ.
ಕಳೆದ ಫೆ.14ರಂದು ನಡೆದ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದ್ದು, ಮಾರ್ಚ್ 11 ರಂದು ಇಲ್ಲಿ ಚುನಾವಣೆ ನಡೆಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.