
ಬೆಂಗಳೂರು : ಜಯನಗರ ಬಿಜೆಪಿ ಶಾಸಕ ವಿಜಯ್ ಕುಮಾರ್ (60) ವಿಧಿವಶರಾಗಿದ್ದಾರೆ.
ಹೃದಯ ಸಂಬಂಧೀ ಕಾಯಿಲೆಯಿಂದ ಬಳಲುತ್ತಿದ್ದ ವಿಜಯ್ ಕುಮಾರ್ ನಿನ್ನೆ ಚುನಾವಣಾ ಪ್ರಚಾರದ ವೇಳೆ ಕುಸಿದು ಬಿದ್ದಿದ್ದರು.
ತಕ್ಷಣವೇ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿಜಯ್ ಕುಮಾರ್ ಮೃತಪಟ್ಟಿದ್ದಾರೆ.
ಆಸ್ಪತ್ರೆ ಕರೆತಂದಾಗಲೇ ಹೃದಯ ಬಡಿತ, ಬಿಪಿ ಕುಸಿದಿದ್ದು, ರಾತ್ರಿ 1 ಗಂಟೆಗೆ ವಿಜಯ್ ಕುಮಾರ್ ವಿಧಿ ವಶರಾಗಿದ್ದಾರೆ ಎಂದು ಜಯದೇವ ಆಸ್ಪತ್ರೆ ನಿರ್ದೇಶಕ ಡಾ. ಮಂಜುನಾರ್ ಸ್ಪಷ್ಟಪಡಿಸಿದ್ದಾರೆ.
ಜಯನಗರ ಕ್ಷೇತ್ರದಿಂದ ಎರಡು ಬಾರಿ ಬಿಜೆಪಿ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಅಲ್ಲದೇ ಪಕ್ಷದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಾರ್ಯನಿರತರಾಗಿದ್ದ ಅವರು ಇತ್ತೀಚಿನ ದಿನಗಳಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದರು.
ಮೃತರ ಅಂತ್ಯಕ್ರಿಯೆಯನ್ನು ಇಂದು ಮಧ್ಯಾಹ್ನ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ನೆರವೇರಿಸಲಾಗುತ್ತದೆ. ಈ ಸಂಬಂಧ ಅವರ ಸಹೋದರ ಹರಿಪ್ರಸಾದ್ ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.