
ಮುಜಫರಾಬಾದ್(ಅ.27): ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನಡೆಯುತ್ತಿದ್ದ ಶಾಂತಿಯುತ ಪ್ರತಿಭಟನೆ ವೇಳೆ ಪಾಕಿಸ್ತಾನದ ಪೊಲೀಸರು ಅಟ್ಟಹಾಸ ಮೆರೆದಿದ್ದಾರೆ. ಪ್ರತಿಭಟನಾನಿರತರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದು ಶಾಂತಿಯುತವಾಗಿ ಧರಣಿ ನಿರತರ ಮೇಲೆ ಅಲ್ಲಿನ ಪೊಲೀಸರು ಮನಸೋ ಇಚ್ಚೆ ಥಳಿಸಿದ್ದಾರೆ.
1947ರಲ್ಲಿ ಪಾಕಿಸ್ತಾನದಿಂದ ಕಾಶ್ಮೀರ ಅತಿಕ್ರಮಣ ಖಂಡಿಸಿ ಪಿಒಕೆಯಲ್ಲಿ ಅಕ್ಟೋಬರ್ 22ರಂದು ಕರಾಳ ದಿನ ಆಚರಿಸಲಾಗಿತ್ತು. ಆಗಿನಿಂದ ಅಲ್ಲಿನ ಜನರ ಮೇಲೆ ಪಾಕಿಸ್ತಾನಿ ಸೈನಿಕರು ಮತ್ತು ಪೊಲೀಸರು ನಿರಂತರ ದೌರ್ಜನ್ಯ ನಡೆಸುತ್ತಾ ಹಿಂಸೆ ನೀಡುತ್ತಿದ್ದಾರೆ. ಕಾಶ್ಮೀರ ಬಿಟ್ಟು ತೊಲಗಿ ಎಂದು ಘೋಷಣೆ ಕೂಗುತ್ತಾ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದರು.
ಈ ವೇಳೆ ಏಕಾಏಕಿ ದಾಳಿ ನಡೆಸಿದ ಪೊಲೀಸರು ಮನಸ್ಸೋ ಇಚ್ಛೆ ಹಲ್ಲೆ ಮಾಡಿದ್ದಾರೆ ಎನ್ನಲಾಗ್ತಿದೆ. ಪಾಕಿಸ್ತಾನ ಪೊಲೀಸರು ಅಮಾಯಕರ ಮನೆಗಳಿಗೆ ನುಗ್ಗಿ ಮಕ್ಕಳು, ಮಹಿಳೆಯರು ಮತ್ತು ವೃದ್ಧರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ.
1947ರಲ್ಲಿ ಅವಿಭಜಿತ ಜಮ್ಮು ಮತ್ತು ಕಾಶ್ಮೀರದ ಮೇಲೆ ಬುಡಕಟ್ಟು ಜನರ ಸೋಗಿನಲ್ಲಿ ಅಕ್ರಮಣ ಮಾಡಿದ ಪಾಕಿಸ್ತಾನಿ ಸೇನೆ ಕಣಿವೆ ರಾಜ್ಯದ ಒಂದು ಮಹತ್ವ ಭಾಗವನ್ನು ವಶಪಡಿಸಿಕೊಂಡಿದ್ದು, ಆಗಿನಿಂದಲೂ ಪಾಕ್ ಆಕ್ರಮಿತ ಕಾಶ್ಮೀರ ಭಾರತ ಮತ್ತು ಪಾಕಿಸ್ತಾನ ನಡುವೆ ವಿವಾದದ ಕೇಂದ್ರ ಬಿಂದುವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.