
ಬೆಂಗಳೂರು (ಜು. 10): ಬೆಂಗಳೂರು ಮಹಾನಗರ ಸಾರಿಗೆ ನಿಗಮ(ಬಿಎಂಟಿಸಿ) ಪ್ರಸಕ್ತ ಶೈಕ್ಷಣಿಕ ಸಾಲಿನ ರಿಯಾಯಿತಿ ದರದ ಸ್ಮಾರ್ಟ್ ಕಾರ್ಡ್ ಮಾದರಿಯ ವಿದ್ಯಾರ್ಥಿ ಬಸ್ ಪಾಸ್ ಪಡೆಯದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಜು.25ರ ವರೆಗೂ ನಿಗಮ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.
ಬಿಎಂಟಿಸಿಯು ಜೂ.13ರಿಂದ ವಿದ್ಯಾರ್ಥಿ ಬಸ್ ಪಾಸ್‌ಗೆ ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಿದ್ದು, ಜೂ.17ರಿಂದ ಸ್ಮಾರ್ಟ್ ಕಾರ್ಡ್ ಮಾದರಿಯ ಬಸ್ ಪಾಸ್ ವಿತರಿಸುತ್ತಿದೆ. ಇದುವರೆಗೂ 1,54,099 ಅರ್ಜಿಗಳು ಸಲ್ಲಿಕೆಯಾಗಿದ್ದು, 60,001 ಪಾಸ್‌ಗಳನ್ನು ವಿತರಿಸಿದೆ.
ಇನ್ನೂ 26,668 ಅರ್ಜಿಗಳು ಶಿಕ್ಷಣ ಸಂಸ್ಥೆಯಿಂದ ಅನುಮೋದನೆ ಬಾಕಿಯಿದ್ದು, ಕೂಡಲೇ ಅನುಮೋದಿಸುವಂತೆ ಸೂಚನೆ ನೀಡಿದೆ. ಅನುಮೋದನೆಗೊಂಡಿರುವ 46,768 ವಿದ್ಯಾರ್ಥಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಸಮಯ, ದಿನಾಂಕ, ಸ್ಥಳವನ್ನು ನಿಗದಿಪಡಿಸಿಕೊಂಡು ಪಾಸ್ ಪಡೆದುಕೊಳ್ಳುವಂತೆ ಬಿಎಂಟಿಸಿ ತಿಳಿಸಿದೆ. ಜು. 25ರೊಳಗಾಗಿ ಇನ್ನೂ ಪಾಸ್ ಪಡೆಯದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ, ಪಾಸ್ ಪಡೆದುಕೊಳ್ಳಬೇಕು ಎಂದು ಬಿಎಂಟಿಸಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.