
ನವದೆಹಲಿ(ಜು.02): ಬಾಲಿವುಡ್ ನಟ ಅಮೀರ್ ಖಾನ್ ಪ್ರಧಾನಿ ನರೇಂದ್ರ ಮೋದಿ ಅವರ ಜಲಶಕ್ತಿ ಅಭಿಯನವನ್ನು ಕೊಂಡಾಡಿದ್ದು, ಪ್ರಧಾನಿ ಅವರ ಚಿಂತನೆ ದೂರದೃಷ್ಟಿಯಿಂದ ಕೂಡಿದೆ ಎಂದು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ತಮ್ಮ ಮೊದಲ ಮನ್ ಕಿ ಬಾತ್‌ನಲ್ಲಿ ನೀರಿನ ಸಂರಕ್ಷಣೆ ಕುರಿತು ಮಾತನಾಡಿದ್ದ ಪ್ರಧಾನಿ ಮೋದಿ, ಚೆನ್ನೈನಲ್ಲಿ ಉದ್ಭವಿಸಿರುವ ನೀರಿನ ಸಂಕಷ್ಟದ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ್ದರು. ಅಲ್ಲದೇ ನೀರಿನ ಸಂರಕ್ಷಣೆಗಾಗಿ ಜಲಶಕ್ತಿ ಅಭಿಯಾನ ಆರಂಭಿಸುವುದಾಗಿ ತಿಳಿಸಿದ್ದರು.
ಮೋದಿ ಅವರ ಅಭಿಯಾನವನ್ನು ಮೆಚ್ಚಿಕೊಂಡಿರುವ ನಟ ಅಮೀರ್ ಖಾನ್, ಈ ಅಭಿಯಾನದಿಂದ ನಿಜಕ್ಕೂ ನೀರಿನ ಸಂರಕ್ಷಣೆಯಾಗಲಿದೆ ಎಂದು ಭರವಸೆ ವ್ಯಕ್ತಡಿಸಿದ್ದಾರೆ. ಅಮೀರ್ ಅವರ 'ಪಾನಿ ಫೌಂಡೇಶನ್' ಮಹರಾಷ್ಟ್ರದ ಬರಪೀಡಿತ ಪ್ರದೇಶಗಳಲ್ಲಿ ನೀರಿನ ಸಂರಕ್ಷಣೆಗಾಗಿ ಈಗಾಗಲೇ ಕೆಲಸ ನಿರ್ವಹಿಸುತ್ತಿದ್ದು, ಈ ಕಾರ್ಯದಲ್ಲಿ ತಾವು ಮೋದಿ ಅವರ ಸಾಥ್ ನೀಡುವುದಾಗಿ ಅಮೀರ್ ಟ್ವೀಟ್ ಮಾಡಿದ್ದಾರೆ.
ಇನ್ನು ಅಮೀರ್ ಟ್ವೀಟ್'ಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ಮೋದಿ, ಜಲಶಕ್ತಿ ಅಭಿಯಾನಕ್ಕೆ ಬೆಂಬಲ ನೀಡಿದ್ದಕ್ಕೆ ಧನ್ಯವಾದ ತಿಳಿಸಿದ್ದಾರೆ. ಅಲ್ಲದೇ ಅಭಿಯನ ಯಶಸ್ವಿಯಾಗಲು ಅಮೀರ್ ಖಾನ್ ಅವರಿಂದ ಸಲಹೆ ಅಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇನ್ನು ಚೆನ್ನೈ ನೀರಿನ ಸಂಕಷ್ಟಕ್ಕೆ ಹಾಲಿವುಡ್ ನಟ ಲಿಯೋನಾರ್ಡೊ ಡಿ ಕ್ಯಾಪ್ರಿಯೋ ಕೂಡ ಆತಂಕ ವ್ಯಕ್ತಪಡಿಸಿದ್ದು, ನೀರಿಲ್ಲದೇ ಸಂಕಷ್ಟ ಎದುರಿಸುತ್ತಿರುವದಕ್ಷಿಣ ಭಾರತದ ಈ ಪ್ರಮುಖ ನಗರವನ್ನು ಮಳೆ ಮಾತ್ರ ರಕ್ಷಿಸಬಲ್ಲದು ಎಂದು ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.