ಏರ್ ಇಂಡಿಯಾದಲ್ಲಿ ಬಾಂಬ್ ಬೆದರಿಕೆ: ವಿಮಾನಗಳ ಹಾರಾಟ ರದ್ದು

Published : Oct 01, 2018, 05:49 PM ISTUpdated : Oct 04, 2018, 11:04 AM IST
ಏರ್ ಇಂಡಿಯಾದಲ್ಲಿ ಬಾಂಬ್ ಬೆದರಿಕೆ: ವಿಮಾನಗಳ  ಹಾರಾಟ ರದ್ದು

ಸಾರಾಂಶ

ವಿಮಾನ ನಿಲ್ದಾಣದ ಸಿಬ್ಬಂದಿ ಹಾಗೂ ಸಿಐಎಸ್'ಎಫ್ ಬಾಂಬ್ ಶೋಧ ಕಾರ್ಯಾಚರಣೆ ಕೈಗೊಂಡಿದ್ದು ತುರ್ತಾಗಿ ತೆರಳುವ ಪ್ರಯಾಣಿಕರನ್ನು ಬೇರೆ ವಿಮಾನಗಳ ಮೂಲಕ ವ್ಯವಸ್ಥೆ ಮಾಡಲಾಗಿದೆ. 

ಜೋದ್'ಪುರ[ಅ.01]: ಜೋದ್'ಪುರದಿಂದ ದೆಹಲಿಗೆ ಹೊರಡುತ್ತಿದ್ದ ವಿಮಾನದಲ್ಲಿ ಬಾಂಬ್ ಬೆದರಿಕೆ ಕರೆ ಬಂದ ಹಿನ್ನಲೆಯಲ್ಲಿ ಜೋದ್ ಪುರ ವಿಮಾನ ನಿಲ್ದಾಣದಿಂದ ಹೊರಡುವ ಎಲ್ಲ ವಿಮಾನಗಳನ್ನು ರದ್ದುಗೊಳಿಸಲಾಗಿದೆ.

ವಿಮಾನ ನಿಲ್ದಾಣದ ಸಿಬ್ಬಂದಿ ಹಾಗೂ ಸಿಐಎಸ್'ಎಫ್ ಬಾಂಬ್ ಶೋಧ ಕಾರ್ಯಾಚರಣೆ ಕೈಗೊಂಡಿದ್ದು ತುರ್ತಾಗಿ ತೆರಳುವ ಪ್ರಯಾಣಿಕರನ್ನು ಬೇರೆ ವಿಮಾನಗಳ ಮೂಲಕ ವ್ಯವಸ್ಥೆ ಮಾಡಲಾಗಿದೆ. ಸದ್ಯ ಜೋದ್ ಪುರ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ, ಜೆಟ್ ಏರ್ ವೇಸ್ ಹಾಗೂ ಸ್ಪೇಸ್ ಜೆಟ್ ವಿಮಾನಗಳ ಸೌಲಭ್ಯವಿದೆ. 

ಪ್ರಕರಣ ಸಂಬಂಧ ಸಿಐಎಸ್ ಎಫ್ ಸಿಬ್ಬಂದಿ 6 ಪ್ರಯಾಣಿಕರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೊಳಪಡಿಸಲಾಗಿದ್ದು ಕೆಲ ಸಮಯದ ನಂತರ ಮೂವರನ್ನು ಬಿಡುಗಡೆಗೊಳಿಸಲಾಗಿದೆ. ಉಳಿದ ಮೂವರು ಪೊಲೀಸರ ವಶದಲ್ಲಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗರ್ಭಧರಿಸಿ 9 ತಿಂಗಳು ಪೂರೈಸಿದ ಹಸುವಿಗೆ ಸೀಮಂತ ಮಾಡಿದ ಮಂಡ್ಯ ರೈತ
ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌