ಬಾಂಬ್ ಬೆದರಿಕೆ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ!

By Web DeskFirst Published Jun 27, 2019, 5:26 PM IST
Highlights

ಏರ್ ಇಂಡಿಯಾ ವಿಮಾನಕ್ಕೆ ಹುಸಿ ಬಾಂಬ್ ಬೆದರಿಕೆ| ಲಂಡನ್’ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ವಿಮಾನ| ಮುಂಬೈ-ನೇವಾರ್ಕ್ ನಡುವೆ ಸಂಚರಿಸುವ ಏರ್ ಇಂಡಿಯಾ ವಿಮಾನ| ಹುಸಿ ಬಾಂಬ್ ಕರೆ ಹಿನ್ನೆಲೆಯಲ್ಲಿ ಲಂಡನ್’ನಲ್ಲಿ ತುರ್ತು ಭೂಸ್ಪರ್ಶ| 

ಲಂಡನ್(ಜೂ.27): ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಮುಂಬೈನಿಂದ ಅಮೆರಿಕದ ನೇವಾರ್ಕ್’ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ, ಲಂಡನ್’ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ.

ಮುಂಬೈ-ನೇವಾರ್ಕ್ ನಡುವೆ ಸಂಚರಿಸುವ ಏರ್ ಇಂಡಿಯಾ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ಹುಸಿ ಕರೆ ಬಂದಿತ್ತು. ಆದರೆ ಮುನ್ನೆಚ್ಚರಿಕೆ ಕ್ರಮವಾಗಿ ವಿಮಾನವನ್ನು ಲಂಡನ್’ನಲ್ಲಿ ತುರ್ತು ಭೂಸ್ಪರ್ಶ ಮಾಡಿ ವಿಮಾನವನ್ನು ತಪಾಸಣೆಗೆ ಗುರಿಪಡಿಸಲಾಯಿತು.

Air India 191 Mumbai-Newark flight has made a precautionary landing at London Stansted Airport due to a bomb threat. More details awaited. pic.twitter.com/heSC3kUV2O

— ANI (@ANI)

ಈ ಕುರಿತು ಟ್ವೀಟ್ ಮಾಡಿರುವ ಏರ್ ಇಂಡಿಯಾ, ಇದೊಂದು ಹುಸಿ ಕರೆಯಾಗಿದ್ದು, ಯಾರೂ ಆತಂಕಪಡಬೇಕಿಲ್ಲ ಎಂದು ಸ್ಪಷ್ಟಪಡಿಸಿದೆ.

click me!