ಪ್ರಥಮಗಳ ದಾಖಲೆ ಬರೆದ ಕನ್ನಡತಿ ನ್ಯಾ.ಮಂಜುಳಾ ಚೆಲ್ಲೂರ್ ನಿವೃತ್ತಿ

Published : Dec 04, 2017, 10:52 PM ISTUpdated : Apr 11, 2018, 01:01 PM IST
ಪ್ರಥಮಗಳ ದಾಖಲೆ ಬರೆದ ಕನ್ನಡತಿ ನ್ಯಾ.ಮಂಜುಳಾ ಚೆಲ್ಲೂರ್ ನಿವೃತ್ತಿ

ಸಾರಾಂಶ

ಕರ್ನಾಟಕದ ಹೈಕೋರ್ಟ್‌ನಲ್ಲಿ ನ್ಯಾಯಾಧೀಶ ಹುದ್ದೆ ಅಲಂಕರಿಸಿದ ಪ್ರಥಮ ಮಹಿಳೆಯೂ ಹೌದು. ಜತೆಗೆ ಕಲ್ಕತ್ತಾ ಹೈಕೋರ್ಟ್‌ನ ಪ್ರಥಮ ಮಹಿಳಾ ಮುಖ್ಯ ನ್ಯಾಯಮೂರ್ತಿ ಆಗಿದ್ದರು

ನವದೆಹಲಿ(ಡಿ.04): ಭಾರತೀಯ ನ್ಯಾಯಾಂಗ ಕ್ಷೇತ್ರದಲ್ಲಿ ಹಲವು ಪ್ರಥಮಗಳ ದಾಖಲೆ ಬರೆದ ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ, ಕನ್ನಡತಿ ಮಂಜುಳಾ ಚೆಲ್ಲೂರ್ ಅವರು ಸೋಮವಾರ ಸೇವೆಯಿಂದ ನಿವೃತ್ತರಾದರು.

ಮೂಲತಃ ಬಳ್ಳಾರಿಯವರಾದ ನ್ಯಾ. ಮಂಜುಳಾ ಅವರು ಬಳ್ಳಾರಿಯಲ್ಲಿ ವಕೀಲಿ ವೃತ್ತಿ ಆರಂಭಿಸಿದ ಮೊದಲ ಮಹಿಳೆ. ಕರ್ನಾಟಕದ ಹೈಕೋರ್ಟ್‌ನಲ್ಲಿ ನ್ಯಾಯಾಧೀಶ ಹುದ್ದೆ ಅಲಂಕರಿಸಿದ ಪ್ರಥಮ ಮಹಿಳೆಯೂ ಹೌದು. ಜತೆಗೆ ಕಲ್ಕತ್ತಾ ಹೈಕೋರ್ಟ್‌ನ ಪ್ರಥಮ ಮಹಿಳಾ ಮುಖ್ಯ ನ್ಯಾಯಮೂರ್ತಿ ಆಗಿದ್ದರು. ಈ ನಡುವೆ ಕೇರಳ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿಯೂ ಸೇವೆ ಸಲ್ಲಿಸಿರುವ ಅವರು 2016ರ ಆಗಸ್ಟ್ನಲ್ಲಿ ಬಾಂಬೆ ಹೈಕೋರ್ಟ್‌ನ ಎರಡನೇ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.

1955ರ ಡಿ.5ರಂದು ಜನಿಸಿದ ನ್ಯಾ. ಮಂಜುಳಾ ಅವರು ಬಾಂಬೆ ಹೈಕೋರ್ಟ್‌ನಲ್ಲಿ 16 ತಿಂಗಳು ಸೇವೆ ಸಲ್ಲಿಸಿದ್ದು, ಹಲವು ಮಹತ್ವದ ಪ್ರಕರಣಗಳನ್ನು ವಿಚಾರಣೆ ನಡೆಸಿದ್ದಾರೆ. ಜನಪರ ತೀರ್ಪುಗಳನ್ನು ನೀಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಪ್ರಕರಣಗಳ ವಿಚಾರಣೆ ನಡೆಸಲು ವಿಶೇಷ ಮಹಿಳಾ ಪೀಠವನ್ನೇ ರಚಿಸಿದ್ದಾರೆ. ಬಾಕಿ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ನ್ಯಾಯಾಲಯದ ಎರಡು ತಿಂಗಳ ಬೇಸಿಗೆ ರಜೆ ಪೈಕಿ ಈ ವರ್ಷ ಒಂದು ತಿಂಗಳು ಕೋರ್ಟ್ ಕಲಾಪಗಳು ನಡೆಯುವಂತೆ ನೋಡಿಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮದುವೆಯಲ್ಲಿ ಅದನ್ನೇ ಮರತೆ ನವ ಜೋಡಿ, 5 ನಿಮಿಷದಲ್ಲಿ ಸಮಸ್ಯೆಗೆ ಪರಿಹಾರ ಹುಡುಕಿದ್ದು ಹೇಗೆ?
ದಿಗ್ವಿಜಯ್ ಹೊಗಳಿಕೆ ಬೆನ್ನಲ್ಲೇ RSSನ್ನು ಅಲ್ ಖೈದಾ ಉಗ್ರ ಸಂಘಟನೆ ಎಂದ ಕಾಂಗ್ರೆಸ್ ನಾಯಕ