
ಸಾವೋಪಾಲೋ(ಅ.25): ಬ್ರೆಜಿಲ್ ಪ್ರವಾಸ ಕೈಗೊಳ್ಳುವ ಭಾರತೀಯರಿಗೆ ಅಲ್ಲಿನ ಅಧ್ಯಕ್ಷ ಜೈರ್ ಬೊಲ್ಸೊನ್ಯಾರೋ ತುಂಬ ವಿಶೇಷವಾದ ಗಿಫ್ಟ್ ನೀಡಿದ್ದಾರೆ. ಇನ್ನು ಮುಂದೆ ಬ್ರೆಜಿಲ್‌ಗೆ ತೆರಳುವ ಭಾರತೀಯರಿಗೆ ವೀಸಾದ ಅವಶ್ಯಕತೆಯಿಲ್ಲ ಎಂದು ಬೊಲ್ಸೊನ್ಯಾರೋ ಘೋಷಿಸಿದ್ದಾರೆ.
ಬ್ರೆಜಿಲ್‌ಗೆ ಭೇಟಿ ನಿಡುವ ಭಾರತ ಹಾಗೂ ಚೀನಿ ಪ್ರವಾಸಿಗರಿಗೆ ವೀಸಾ ಅಗತ್ಯವನ್ನು ತಮ್ಮ ಸರ್ಕಾರ ಕೈ ಬಿಟ್ಟಿದೆ ಎಂದು ಅಧ್ಯಕ್ಷ ಜೈರ್ ಬೊಲ್ಸೊನ್ಯಾರೋ ಸ್ಪಷ್ಟಪಡಿಸಿದ್ದಾರೆ.
ಭಾರತದ ಜೊತೆಗಿನ ಬ್ರೆಜಿಲ್ ಸಂಬಂಧವನ್ನು ಮತ್ತಷ್ಟು ಬಲಗೊಳಿಸುವ ಅವಶ್ಯಕತೆಯಿದ್ದು, ಈ ಹಿನ್ನೆಲೆಯಲ್ಲಿ ಭಾರತೀಯರಿಗೆ ವೀಸಾ ರಹಿತ ಪ್ರವಾಸಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಬಲ್ಸೊನ್ಯಾರೋ ತಿಳಿಸಿದ್ದಾರೆ.
ಅಭಿವೃದ್ದಿ ಹೊಂದಿದ ದೇಶಗಳಿಗೆ ವೀಸಾ ಅಗತ್ಯತೆಯ ನಿಯಮಗಳಲ್ಲಿ ಸಡಲಿಕೆ ಮಾಡುವ ಹೊಸ ನೀತಿಯನ್ನು ಬ್ರೆಜಿಲ್ ಅಳವಡಿಸಿಕೊಂಡಿದ್ದು, ಈ ಹಿಂದೆ ಅಮೆರಿಕ, ಕೆನಡಾ, ಆಸ್ಟ್ರೇಲಿಯಾ ಮತ್ತು ಜಪಾನ್ ದೇಶಗಳ ಪ್ರವಾಸಿಗರಿಗೆ ವೀಸಾ ಅಗತ್ಯವನ್ನು ರದ್ದುಗೊಳಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.