
ಶಿವಮೊಗ್ಗ (ಏ. 02): ಸಪ್ತಪದಿ ತುಳಿಯುತ್ತಿದ್ದಾಗಲೇ ಮದುಮಗಳ ಮೇಲೆ ಪ್ರಿಯಕರ ಕತ್ತಿಯಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಸಾಗರ ತಾಲ್ಲೂಕಿನ ಭೀಮನಕೋಣೆ ಕಾಪ್ಟೆಮನೆ ವರನ ಸ್ವಗೃಹದಲ್ಲಿ ನಡೆದಿದೆ.
ಭರತ್ ಎಂಬುವವರ ಜೊತೆ ಸೀತಾ ಎಂಬುವವರ ಮದುವೆ ನಡೆಯುತ್ತಿತ್ತು. ಭಗ್ನ ಪ್ರೇಮಿ ಮಧುಮಗಳ ಕುತ್ತಿಗೆಯನ್ನೇ ಚಾಕುವಿನಿಂದ ಇರಿದಿದ್ದಾನೆ. ತಾಳಿ ಕಟ್ಟಿದ ನಂತರ ಸಪ್ತಪದಿ ತುಳಿಯುತ್ತಿದ್ದಾಗಲೇ ಹಲ್ಲೆ ನಡೆಸಿದ್ದಾನೆ. ತಪ್ಪಿಸಲು ಬಂದ ಹುಡುಗಿಯ ಚಿಕ್ಕಪ್ಪ ಗಂಗಾಧರಪ್ಪನ ಮೇಲೂ ಹಲ್ಲೆ ಮಾಡಿದ್ದಾನೆ.
ಹಲ್ಲೆಗೊಳಗಾದ ಪ್ರೇಮ ಹಾಗೂ ಗಂಗಾಧರಪ್ಪರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರವಾನಿಸಲಾಗಿದೆ. ಆರೋಪಿಯನ್ನು ಅಲ್ಲೇ ಇದ್ದ ಸಂಬಂಧಿಕರು ಪೋಲೀಸರಿಗೆ ಒಪ್ಪಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.