
ಬೆಂಗಳೂರು (ಸೆ.18): ನದಿ ನೀರು ಹಂಚಿಕೆ ಸಮಸ್ಯೆಗಳನ್ನು ಬಗೆಹರಿಸಲು ನದಿಗಳನ್ನು ರಾಷ್ಟ್ರೀಯ ಸಂಪತ್ತು ಎಂದು ಘೋಷಿಸಬೇಕು ಹಾಗೂ ರಾಷ್ಟ್ರೀಯ ಜಲ ನೀತಿಯನ್ನು ಜಾರಿಗೆ ತರಬೇಕೆಂದು ಆದಿ ಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದಾರೆ.
ಜಲ ನೀತಿ ರೂಪಿಸುವುದರಿಂದ ಕೇವಲ ಕಾವೇರಿ ನದಿ ನೀರಿಗೆ ಮಾತ್ರವಲ್ಲ ಇತರೇ ಜಲ ವಿವಾದಗಳಿಗೂ ಅನುಕೂಲವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಕಾವೇರಿ ನದಿ ವಿವಾದ 2 ರಾಜ್ಯಗಳಿಗೆ ಸಂಬಂಧಿಸಿದ್ದು, ಆದುದರಿಂದ ಸೌಹಾರ್ಧಯುತವಾಗಿ ಚರ್ಚಿಸಿ ಸಮಸ್ಯೆ ಪರಿಹರಿಸಿಕೊಳ್ಳಬೇಕು ಎಂದಿರುವ ಸ್ವಾಮಿಜಿ ಮಂಡ್ಯದಲ್ಲಿ ನಡೆಯುತ್ತಿರುವ ಕಾವೇರಿ ಹೋರಾಟದಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದಾರೆ.
1924 ರಲ್ಲಿ ಆದ ಒಪ್ಪಂದ 1974 ಕ್ಕೆ ಕೊನೆಗೊಳ್ಳಬೇಕಿತ್ತು. ಅದನ್ನು ಬದಲಾವಣೆಗೆ ಅನುಗುಣವಾಗಿ ಮಾರ್ಪಾಡು ಮಾಡಬೇಕಿತ್ತು. ಆದರೆ ಅದು ಆಗಿಲ್ಲ. ಎರಡೂ ರಾಜ್ಯಗಳು ಕುಳಿತು ಮಾತನಾಡುವ ಮೂಲಕ ಪರಿಹಾರ ಸಾಧ್ಯ ಎಂದು ಸ್ವಾಮಿಜಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.