
ಬೆಂಗಳೂರು : ರಾಜ್ಯದಲ್ಲಿನ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಕುರಿತು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಂದ ಬ್ರಿಟಿಷ್ ಹೈಕಮಿಷನರ್ ಮಾಹಿತಿ ಪಡೆದುಕೊಂಡಿದ್ದಾರೆ. ಬ್ರಿಟಿಷ್ ಹೈಕಮಿಷನರ್ ಡೊನಾಲ್ಡ್ ಮೈಕ್ ಆಲಿಸ್ಟರ್ ಅವರು ಶುಕ್ರವಾರ ದೇವೇಗೌಡರ ನಿವಾಸಕ್ಕೆ ತೆರಳಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ನಂತರ ಸುದ್ದಿಗಾರರ ಜತೆ ಮಾತನಾಡಿದ ದೇವೇಗೌಡರು, ಇದೊಂದು ಸೌಜನ್ಯದ ಭೇಟಿ. ಬೇರೆ ಬೇರೆ ರಾಜ್ಯಗಳಲ್ಲಿ ರಾಜಕೀಯ ವ್ಯವಸ್ಥೆ ಹೇಗಿದೆ ಎಂಬುದನ್ನು ತಿಳಿಯಲು ಬ್ರಿಟಿಷ್ ಹೈಕಮಿಷನರ್ ಬರುತ್ತಾರೆ. ರಾಜ್ಯದಲ್ಲಿ ಕೆಲವು ಗೊಂದಲಗಳಿವೆ ಎಂಬ ಮಾಹಿತಿಯನ್ನು ಮಾಧ್ಯಮಗಳಿಂದ ತಿಳಿದು ಆಗಮಿಸಿದ್ದಾರೆ.
ಈ ವೇಳೆ ರಾಜ್ಯದ ರಾಜಕೀಯ ಬೆಳವಣಿಗೆ ಕುರಿತು ಮಾತುಕತೆ ನಡೆಸಲಾಗಿದೆ. ಸರ್ಕಾರವು ಪತನವಾಗಲಿದೆ ಎಂಬ ರೀತಿಯಲ್ಲಿ ಮಾಧ್ಯಮಗಳು ವರದಿ ಮಾಡುತ್ತಿವೆ. ಆದರೆ, ಇದು ಸತ್ಯಕ್ಕೆ ದೂರವಾದುದು. ರಾಜ್ಯದಲ್ಲಿ ಬಿಜೆಪಿಗೆ ಅಧಿಕಾರ ಬಿಟ್ಟುಕೊಡಲು ಕಾಂಗ್ರೆಸ್ ಮತ್ತು ಜೆಡಿಎಸ್ ಇಬ್ಬರೂ ಸಿದ್ಧ ಇಲ್ಲ. ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆದುಕೊಂಡು ಹೋಗಿದ್ದಾರೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.