
ಮಂಗಳೂರು(ಜ.07): ಕರಾವಳಿ ಗಲಭೆಗೆ ಮತ್ತೊಂದು ಹತ್ಯೆಯಾಗಿದೆ. ದುಷ್ಕರ್ಮಿಗಳಿಂದ ತೀವ್ರವಾಗಿ ಹಲ್ಲೆಗೊಳಗಾದ ಬಷೀರ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಜ.3ರಂದು ಬಜರಂಗದಳದ ಕಾರ್ಯಕರ್ತ ದೀಪಕ್ ರಾವ್ ಅವರನ್ನು ಹತ್ಯೆ ಮಾಡಲಾಗಿತ್ತು. ಅದೇ ದಿನದಂದು ತಮ್ಮ ಫಾಸ್ಟ್'ಫುಡ್ ಅಂಗಡಿಯಿಂದ ಕೆಲಸ ಮುಗಿಸಿ ರಾತ್ರಿ 11.30ರ ಸುಮಾರಿಗೆ ಮನೆಗೆ ತೆರಳುತ್ತಿದ್ದ ವ್ಯಾಪಾರಿ ಅಬ್ದುಲ್ ಬಷೀರ್(47) ಮೇಲೆ ಕೊಟ್ಟಾರ ಚೌಕಿಯಲ್ಲಿ 3 ಬೈಕ್'ನಲ್ಲಿ ಬಂದ 7 ಮಂದಿ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದರು.
ತೀವ್ರವಾಗಿ ಗಾಯಗೊಂಡ ಇವರನ್ನು ಸ್ಥಳೀಯರು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಿದ್ದರು. ನಾಲ್ಕು ದಿನ ಜೀವನ್ಮರಣ ಸ್ಥಿತಿಯಲ್ಲಿದ್ದ ಬಷೀರ್ ಕೊನೆಗೂ ಬದುಕಲಿಲ್ಲ. ಎ.ಜೆ. ಆಸ್ಪತ್ರೆಗೆ ಶಾಸಕ ಮೊಯ್ದಿನ್ ಬಾವ, ಕಮೀಷನರ್ ಟಿ.ಆರ್ ಸುರೇಶ್ ಭೇಟಿ ನೀಡಿದ್ದು, ಮಂಗಳೂರಿನಾದ್ಯಂತ ಬಿಗಿ ಬಂದೂಬಸ್ತ್ ಏರ್ಪಡಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.