
ಬೆಂಗಳೂರು: ಮುಂದಿನ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬ ಬಗ್ಗೆ ಯಡಿಯೂರಪ್ಪ ಅವರು ದ್ವಂದ್ವದಲ್ಲಿದ್ದಾರೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಕರ್ನಾಟಕದಿಂದ ಕಣಕ್ಕಿಳಿಯುತ್ತೇನೆ. ವಿಜಯಪುರ ಇಲ್ಲವೇ ಬಾಗಲಕೋಟೆಯಿಂದ ಸ್ಪರ್ಧಿಸುತ್ತೇನೆ. ಪಕ್ಷದ ಮುಖಂಡರ ಸಲಹೆ- ಸೂಚನೆ ಪಡೆದೇ ಅಂತಿಮ ತೀರ್ಮಾನ ಕೈಗೊಳ್ಳುತ್ತೇನೆ. ಉತ್ತರ ಕರ್ನಾಟಕ ಭಾಗದಿಂದಲೇ ಜನಾದೇಶ ಪಡೆಯುವ ವಿಶ್ವಾಸವಿದೆ, ಎಂದು ಯಡಿಯೂರಪ್ಪ ಹೇಳಿದ್ದಾರೆ.
ಯಡಿಯೂರಪ್ಪ ಉತ್ತರ ಕರ್ನಾಟಕದಲ್ಲಿ ಸ್ಪರ್ಧಿಸುವುದಾದರೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಸ್ಪರ್ಧಿಸಲಿ, ಎಂದು ಬ. ಬಾಗೇವಾಡಿ ಮಾಜಿ ಶಾಸಕ ಎಸ್.ಕೆ. ಬೆಳ್ಳುಬ್ಬಿ ಆಹ್ವಾನ ನೀಡಿದ್ದಾರೆ.
ಬೀದರ್ ಜಿಲ್ಲೆಯಲ್ಲಿ ಯಡಿಯೂರಪ್ಪ ಅವರು ಸ್ಪರ್ಧಿಸಲು ಮುಂದಾದಲ್ಲಿ 50 ಸಾವಿರ ಮತಗಳಿಂದ ಗೆಲ್ಲಿಸುತ್ತೇವೆ, ಎಂದು ಬೀದರ್ ಸಂಸದ ಭಗವಂತ ಖೂಬಾ ಹೇಳಿದ್ದಾರೆ.
ಯಡಿಯೂರಪ್ಪ ಅವರಿಗೆ ನಾನು ಪ್ರತಿನಿಧಿಸುವ ಹುಕ್ಕೇರಿ ಕ್ಷೇತ್ರವನ್ನು ಬಿಟ್ಟು ಕೊಡುತ್ತೇನೆ. ಅವರನ್ನು ನಾನು ಗೆಲ್ಲಿಸುವೆ ಎಂದು ಬಿಜೆಪಿ ಶಾಸಕ ಉಮೇಶ ಕತ್ತಿ ಕೂಡಾ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.