
ಬೆಂಗಳೂರು(ಮೇ 26): ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಯಡಿಯೂರಪ್ಪನವರ ನೇತೃತ್ವದಲ್ಲೇ ಬಿಜೆಪಿ ಜನತೆಯ ಮುಂದೆ ನಿಲ್ಲುವುದು ಖಚಿತವಾಗಿದೆ. ಅಲ್ಲದೇ, ಬಿಎಸ್'ವೈ ಅವರನ್ನೇ ಸಿಎಂ ಅಭ್ಯರ್ಥಿಯನ್ನಾಗಿ ಮುಂದಿಡಲು ಬಿಜೆಪಿ ನಿರ್ಧರಿಸಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಈ ವಿಷಯವನ್ನು ಪ್ರಕಟಿಸಿದ್ದಾರೆ. 2018ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಯಡಿಯೂರಪ್ಪ ಬಿಜೆಪಿಯ ಸಿಎಂ ಅಭ್ಯರ್ಥಿ ಎಂದು ಅಮಿತ್ ಶಾ ಇಂದು ಶುಕ್ರವಾರ ಘೋಷಿಸಿದ್ದಾರೆ. ಇದರೊಂದಿಗೆ, ಈಶ್ವರಪ್ಪ ವರ್ಸಸ್ ಯಡಿಯೂರಪ್ಪ ಬಣಗಳ ಕಚ್ಚಾಟದಲ್ಲಿ ರಾಜ್ಯದ ಬಿಜೆಪಿಯಲ್ಲಿ ಏರ್ಪಟ್ಟಿರುವ ಗೊಂದಲಕ್ಕೆ ಅಮಿತ್ ಶಾ ತೆರೆ ಎಳೆದಿದ್ದಾರೆ. ಯಡಿಯೂರಪ್ಪನವರೇ ರಾಜ್ಯ ಬಿಜೆಪಿಯಲ್ಲಿ ಅಂತಿಮ ಎಂಬ ಸಂದೇಶವನ್ನು ಅಮಿತ್ ಶಾ ಸಾರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.