
ಹೂವಿನಹಡಗಲಿ/ಕಂಪ್ಲಿ/ಹಗರಿಬೊಮ್ಮನಹಳ್ಳಿ: ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆಯ ಫಲಿತಾಂಶದಿಂದ ರಾಜಕೀಯ ಏರುಪೇರುಗಳಾಗಿ ಮೈತ್ರಿ ಸರ್ಕಾರ ಕುಸಿದು ಸಿಎಂ ಎಚ್.ಡಿ.ಕುಮಾರಸ್ವಾಮಿ ಮನೆಗೆ ಹೋಗುವುದು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.
ಬಿಜೆಪಿ ಅಭ್ಯರ್ಥಿ ಜೆ.ಶಾಂತಾ ಪರ ಪ್ರಚಾರ ಭಾಷಣದಲ್ಲಿ ಮಾತನಾಡಿ, ಜೆಡಿಎಸ್, ಕಾಂಗ್ರೆಸ್ ಹಣ ಬಲದಿಂದ, ಜಾತಿ ವಿಷ ಬೀಜ ಬಿತ್ತುವ ಮೂಲಕ ನಾವು ಗೆದ್ದೇ ಗೆಲ್ಲುತ್ತೇವೆಂಬ ಭ್ರಮೆಯಲ್ಲಿವೆ. ಸರ್ಕಾರದ ದುರಾಡಳಿತಕ್ಕೆ ಬಳ್ಳಾರಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ.
ರಾಜ್ಯ ರೈತರ ಸಾಲ ಮನ್ನಾ ಮಾಡುತ್ತೇನೆಂದು ಅಧಿಕಾರಕ್ಕೆ ಬಂದ ದಿನದಿಂದ ಬೊಬ್ಬೆ ಹೊಡೆಯುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜ್ಯದಲ್ಲಿ 200 ರೈತರ ಆತ್ಮಹತ್ಯೆ ಮಾಡಿಕೊಂಡರೂ ಸರ್ಕಾರದ ಬೊಕ್ಕಸದಿಂದ ಹಣ ನೀಡುತ್ತಿಲ್ಲ ಎಂದು ಟೀಕಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.