
ಬೆಂಗಳೂರು: ಸರಣಿ ಸೋಲಿನಿಂದ ಕಂಗೆಟ್ಟ ಬಿಜೆಪಿ ಕಂಗೆಟ್ಟಿದ್ದು, ಯಡಿಯೂರಪ್ಪ ಆತಂಕಗೊಂಡಿದ್ದಾರೆಂದು ಹೇಳಲಾಗಿದೆ.
ವಿಧಾನ ಪರಿಷತ್ತು ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶಗಳು ಮಂಗಳವಾರ ಪ್ರಕಟವಾಗಿದ್ದು, ಬಿಜೆಪಿ ಒಂದು ಸ್ಥಾನ ಕಳೆದುಕೊಂಡಿದೆ. ರಾಜರಾಜೇಶ್ವರಿ ನಗರ ಚುನಾವಣೆಯಲ್ಲೂ ಬಿಜೆಪಿ ಸೋಲನ್ನನುಭವಿಸಿತ್ತು. ಇದೀಗ ಜಯನಗರ ವಿಧಾನಸಭೆ ಕ್ಷೇತ್ರದ ಸೋಲಿನಿಂದ ಬಿಜೆಪಿ ಕಂಗೆಟ್ಟಿದೆಯೆನ್ನಲಾಗಿದೆ.
ಈ ಬೆಳವಣಿಗೆಗಳಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪಆತಂಕಗೊಂಡಿದ್ದಾರೆನ್ನಲಾಗಿದೆ. ಮನೆಯಿಂದ ಹೊರಗೆ ಬಾರದೇ, ಮಾಧ್ಯಮಗಳಿಂದಲೂ ಯಡಿಯೂರಪ್ಪ ಅಂತರ ಕಾಯ್ದುಕೊಂಡಿದ್ದರು.
ರಾಜ್ಯ ಇತರ ನಾಯಕರ ವಿರುದ್ಧ ಯಡಿಯೂರಪ್ಪ ಬೇಸರಗೊಂಡಿದ್ದು, ಆಪ್ತರ ಭೇಟಿಗೂ ನಿರಾಕರಿಸುತ್ತಿದ್ದಾರೆಯೆನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.